Drip irrigation equipment facility: Warning against being cheated by middlemen
ಕೊಪ್ಪಳ ಸೆಪ್ಟೆಂಬರ್ 04, (ಕರ್ನಾಟಕ ವಾರ್ತೆ): ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕಿನಲ್ಲಿ ರೈತರಿಗೆ ಕೆಲ ಮಧ್ಯವರ್ತಿಗಳು ತೋಟಗಾರಿಕೆ ಇಲಾಖೆಯ ಹಾಗೂ ಕೆಲವೊಂದು ಕಂಪನಿಗಳ ಹೆಸರು ಹೇಳಿಕೊಂಡು ಪಿಎಂಕೆಎಸ್‌ವೈ ಯೋಜನೆಯಡಿ ಹನಿ ನೀರಾವರಿ ಸಲಕರಣೆಗಳನ್ನು ಕೊಡಿಸುವುದಾಗಿ ತಮಗೆ ತಿಳಿದಂತೆ ಸುಳ್ಳು ಹೇಳಿ ರೈತರಿಂದ ಹಣ ವಸೂಲಿ ಮಾಡಿ ರೈತರಿಗೆ ಮೋಸ ಮಾಡುತ್ತಿರುವುದು ತಿಳಿದು ಬಂದಿರುತ್ತದೆ.
ಆದ್ದರಿಂದ ರೈತರು ಮಧ್ಯವರ್ತಿಗಳಿಂದ ಮೋಸ ಹೋಗದೆ, ನೇರವಾಗಿ ತೋಟಗಾರಿಕೆ ಇಲಾಖೆ ಗಂಗಾವತಿ ಕಛೇರಿ ಅಥವಾ ಸಂಬAಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಭೇಟಿ ಮಾಡಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ತೋಟಗಾರಿಕೆ ಇಲಾಖೆಯಿಂದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಪಿಎಂಕೆಎಸ್‌ವೈ ಯೋಜನೆಯಡಿ ತಮ್ಮ ಹೊಲದಲ್ಲಿ ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಲು ಅವಕಾಶವಿರುತ್ತದೆ. ರೈತರು ಯಾವುದೇ ಮಧ್ಯವರ್ತಿಗಳ ಬಳಿ ತೆರಳದೇ ನೇರವಾಗಿ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ, ಸರ್ಕಾರದಿಂದ ಅಧಿಕೃತವಾಗಿ ಅನುಮೋದನೆಗೊಂಡ ತಮ್ಮ ಇಚ್ಛೆಯ ಕಂಪನಿಗಳನ್ನು ಆಯ್ಕೆ ಮಾಡಿಕೊಂಡು ತಾವು ಬೆಳೆಯುವ ತೋಟಗಾರಿಕೆ ಬೆಳೆಗಳಾದ ತರಕಾರಿ, ಹಣ್ಣು, ಹೂವು ಹಾಗೂ ಇತರೆ ತೋಟಗಾರಿಕೆ ಬೆಳೆಗಳಿಗೆ ಬೆಳೆಯುವ ವಿಸ್ತೀರ್ಣ ಹಾಗೂ ಬೆಳೆಗಳ ಅಂತರ ತಿಳಿಸಿ ಬೆಳೆಗೆ ಸಂಬಂಧಿಸಿದ ಹನಿ ನೀರಾವರಿ ಘಟಕದ ವೆಚ್ಚ ಹಾಗೂ ವಂತಿಕೆಯನ್ನು ಪಾವತಿಸುವ ಬಗ್ಗೆ ಅಳವಡಿಸುವ ಕಂಪನಿಯಿಂದ ಕೊಟೇಷನ್ ಪಡೆದು ದಾಖಲಾತಿಗಳನ್ನು ಕಂಪನಿಗೆ ಸಲ್ಲಿಸಿ, ನಂತರ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಯೋಜನೆಯ ಸದುಪಯೋಗ ಪಡಸಿಕೊಳ್ಳಬೇಕು. ಯಾವುದೇ ಮಧ್ಯವರ್ತಿಗಳು ಮೋಸ ಮಾಡುವುದು ಕಂಡುಬಂದಲ್ಲಿ ನೇರವಾಗಿ ತೋಟಗಾರಿಕೆ ಇಲಾಖೆಗೆ ತಿಳಿಸಬೇಕು ಎಂದು ಗಂಗಾವತಿ, ಕನಕಗಿರಿ ಮತ್ತು ಕಾರಟಗಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…