Breaking News

ಸೆ.8 ರಿಂದ ಜಿಲ್ಲೆಯಲ್ಲಿ ಆದಿ ಕರ್ಮಯೋಗಿ ಅಭಿಯಾನ ತರಬೇತಿ ಕಾರ್ಯಾಗಾರ

Adi Karmayogi Abhiyan training workshop in the district from September 8
ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ನಿರ್ದೇಶನದನ್ವಯ ರಾಜ್ಯದಲ್ಲಿ ಆದಿ ಕರ್ಮಯೋಗಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಮೂರು ದಿನಗಳ ಕಾಲ ವಸತಿ ಸಹಿತವಾಗಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಸೆಪ್ಟೆಂಬರ್ 8 ರಿಂದ 10 ರವರೆಗೆ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೊಗಲದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಕೃಷಿ ಪಂಡಿತ ಪ್ರಶಸ್ತಿಗೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Application deadline extended for Krishi Pandita Award ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): 2025-26 ನೇ ಸಾಲಿನಲ್ಲಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.