Application deadline extended for Krishi Pandita Award
ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): 2025-26 ನೇ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 8 ರವರೆಗೆ ವಿಸ್ತರಿಸಲಾಗಿದೆ.
ಕೆ.ಕಿಸಾನ್ ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಅರ್ಜಿ ಸಲ್ಲಿಸಲು ತೊಂದರೆಯಾಗಿದ್ದು, ಆಸಕ್ತ ರೈತ ಮತ್ತು ರೈತ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಅವಕಾಶವನ್ನು ಎಲ್ಲಾ ರೈತ ಬಾಂಧವರು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.