Breaking News

ಪ್ರತಿ ಮಗುವಿನ ಘನತೆ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ: ಎಡಿಸಿ ಸಿದ್ರಾಮೇಶ್ವರ

It is our duty to uphold the dignity of every child: ADC Sidrameshwar

Screenshot 2025 09 06 19 03 35 92 E307a3f9df9f380ebaf106e1dc980bb68605050587010541193

ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಪ್ರತಿ ಮಗುವಿನ ಹಕ್ಕುಗಳನ್ನು ಅನುಭವಿಸಲು ಮತ್ತು ಆನಂದಿಸಲು ಅನುಕೂಲಕರವಾಗುವ ಪರಿಸರವನ್ನು ನಿರ್ಮಿಸಿ, ಮಗುವಿನ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.
ಶನಿವಾರದಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳರವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಎಲ್ಲಾ ವಸತಿ ನಿಲಯಗಳ ನಿಲಯ ಪಾಲಕರಿಗೆ, ಪ್ಯಾರಾ ಮೆಡಿಕಲ್ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯಸ್ಥರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಹಕ್ಕುಗಳು, ಮಕ್ಕಳಿಗೆ ಸಂಬAಧಿಸಿದ ಕಾನೂನುಗಳು ಮತ್ತು ಮಕ್ಕಳ ರಕ್ಷಣಾ ನೀತಿಗಳ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿನ ಪ್ರತಿ ಮಗುವು ಸುರಕ್ಷಿತ, ರಕ್ಷಣಾತ್ಮಕ ಮತ್ತು ಸಶಕ್ತ ಪರಿಸರದಲ್ಲಿ ಬೆಳೆಯುವುದರೊಂದಿಗೆ, ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಹಾಗೂ ಮಗುವು ತನ್ನ ಸಾಮರ್ಥ್ಯವನ್ನು ತಲುಪಲು ಅವಕಾಶಗಳನ್ನು ಒದಗಿಸಬೇಕು. ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸಲು ಮತ್ತು ಆನಂದಿಸಲು ಅನುಕೂಲಕರವಾದ ಪರಿಸರವನ್ನು ನಿರ್ಮಿಸಲು ರಾಜ್ಯದಲ್ಲಿನ ಎಲ್ಲಾ ಭಾಗೀದಾರರು ಅಂದರೆ ಪೋಷಕರು, ಆರೈಕೆ ಸೇವೆಗಳನ್ನು ನೀಡುವವರು ಮತ್ತು ಸಮುದಾಯ ಒಟ್ಟುಗೂಡಿ ಕೆಲಸ ಮಾಡುವುದರೊಂದಿಗೆ ಮಕ್ಕಳ ಕುರಿತಾದ ತಾರತಮ್ಯಗಳನ್ನು ನಿವಾರಿಸುವ ಹಾಗೂ ಮಕ್ಕಳ ಭಾಗವಹಿಸುವಿಕೆ, ಸಂಭಾಷಣೆ ಮತ್ತು ಅಭಿಪ್ರಾಯಗಳನ್ನು ಗೌರವಿಸುವುದರೊಂದಿಗೆ ಮಗುವಿನ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 (ಕೆಎಸ್‌ಸಿಪಿಪಿ)ಯು ಮಕ್ಕಳ ಅಧಿಪತ್ಯದ ತತ್ವವನ್ನಾಧರಿಸಿದ ಮಕ್ಕಳ ರಕ್ಷಣೆಯ ಒಂದು ಸಮಗ್ರ ಭಾಗವಾಗಿದೆ. ಆದ್ದರಿಂದ ನಿಮ್ಮ ವಸತಿ ನಿಲಯ/ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ-2023ನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಮತ್ತು ಮಕ್ಕಳಿಗೆ ಸಂಬAಧಿಸಿದ ಕಾನೂನುಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಮೂಲಕ ಮಕ್ಕಳ ಮೇಲಾಗುವ ವಿವಿಧ ರೀತಿಯ ಅಪರಾಧಗಳನ್ನು ತಡೆಗಟ್ಟಿ ಮಕ್ಕಳಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಅವರು ಮಾತನಾಡಿ, ಜಿಲ್ಲೆಯ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ, ದೌರ್ಜನ್ಯ ಎಸಗಿದ ಪ್ರಕರಣಗಳು ಮತ್ತು ವಸತಿ ನಿಲಯದಿಂದ ಮಕ್ಕಳು ಈಜಾಡಲೆಂದು ತೆರಳಿದ ಸಂದರ್ಭದಲ್ಲಿ ಮೃತಪಟ್ಟ ಪ್ರಕರಣಗಳು ವರದಿಯಾಗಿವೆ. ಭಾರತ ಸಂವಿಧಾನವು ರಾಷ್ಟçದಲ್ಲಿನ ಎಲ್ಲಾ ಮಕ್ಕಳ ಪಾಲನೆ ಮತ್ತು ಪೋಷಣೆಯ ಜವಾಬ್ದಾರಿ ಸರಕಾರದ್ದೆಂದು ತಿಳಿಸುತ್ತದೆ. ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರವು ಹಿಂದುಳಿದ ವರ್ಗಗಳ ಉನ್ನತಿಗಾಗಿ ವಸತಿ ನಿಲಯ, ವಸತಿ ಶಾಲೆಗಳನ್ನು ಆರಂಭಿಸಿದ್ದು, ಇಂತಹ ಸಂಸ್ಥೆಗಳಲ್ಲಿ ವಾಸಿಸುವ ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ವಸತಿ ನಿಲಯದ ಮಕ್ಕಳ ಮೇಲಿನ ಯಾವುದೇ ರೀತಿಯ ಅಪರಾಧ ಹಾಗೂ ಮಕ್ಕಳ ನಿರ್ಲಕ್ಷö್ಯ ಸಲ್ಲದು ಎಂದು ಅವರು ಹೇಳಿದರು.
ರಾಜ್ಯದ ಉಚ್ಛ ನ್ಯಾಯಾಲಯವು ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ-2023 ರ ಅಳವಡಿಕೆ ಕಡ್ಡಾಯವೆಂದು ನಿರ್ದೇಶಿಸಿದೆ. ಈ ಕುರಿತು ಜಿಲ್ಲೆಯಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ, ವಸತಿ ನಿಲಯಗಳ ಪ್ರಾಚಾರ್ಯರಿಗೆ ತರಬೇತಿಯನ್ನು ನೀಡಿದೆ. ಜಿಲ್ಲೆಯಲ್ಲಿ ಎಲ್ಲಾ ಭಾಗೀದಾರರಿಗೆ ತರಬೇತಿ ಪೂರ್ಣಗೊಂಡಿರುತ್ತದೆ. ಆದ್ದರಿಂದ ಮಕ್ಕಳ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ತಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆಯನ್ನು ಪಡೆದು ವರದಿಯನ್ನು ಒಂದು ತಿಂಗಳೊಳಗಾಗಿ ಆಯೋಗಕ್ಕೆ ಸಲ್ಲಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸುತ್ತಾ, ನಿರ್ಲಕ್ಷö್ಯವಹಿಸಿದಲ್ಲಿ ಶಿಸ್ತು ಕ್ರಮಗಳಿಗೆ ಮೇಲಾಧಿಕಾರಿಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಫಾರಸು ಮಾಡುತ್ತದೆಂದು ತಿಳಿಸಿದರು. ಮಕ್ಕಳಿಗೆ ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ವ್ಯಾಪಕ ಜಾಗೃತಿಯನ್ನು ಮೂಡಿಸಿ ಎಂದು ಆಯೋಗದ ಸದಸ್ಯರು ತಿಳಿಸಿದರು.
ಯುನಿಸೆಫ್-ಮಕ್ಕಳ ರಕ್ಷಣಾಯೋಜನೆ ಕೊಪ್ಪಳದ ವಿಭಾಗೀಯ ಸಂಯೋಜಕರಾದ ಡಾ. ಕೆ.ರಾಘವೇಂದ್ರ ಭಟ್ ಅವರು ಮಾತನಾಡಿ, ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣಾ ನೀತಿ -2016 ಪರಿಷ್ಕರಣೆ-2023ರ ಕುರಿತು ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳದ ವ್ಯವಸ್ಥಾಪಕರಾದ ಹರೀಶ್ ಜೋಗಿ ಅವರು ಮಾತನಾಡಿ, ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2023ರ ಕುರಿತು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಾಹಾಂತಸ್ವಾಮಿ ಪೂಜಾರ ಅವರು ಮಿಷನ್ ವಾತ್ಸಲ್ಯ ಕುರಿತು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಪ್ರಕಾಶ ವಡ್ಡರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪ್ರಕಾಶ ಕಡಗದ, ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಜಗದೀಶ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅಜ್ಮೀರ ಅಲಿ, ಸೇರಿದಂತೆ ಜಿಲ್ಲೆಯ ಎಲ್ಲಾ ಇಲಾಖೆಗಳ ವಸತಿ ನಿಲಯಗಳ ನಿಲಯ ಪಾಲಕರು, ಪ್ಯಾರಾ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳ ಅಧೀಕ್ಷಕರು ಭಾಗವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಿವಲೀಲಾ ವನ್ನೂರು ನಿರೂಪಿಸಿದರು, ರವಿಕುಮಾರ ಪವಾರ ಸ್ವಾಗತಿಸಿದರು, ಪ್ರತಿಭಾ ಪ್ರಾರ್ಥಿಸಿದರು, ಪ್ರಶಾಂತರೆಡ್ಡಿ ವಂದಿಸಿದರು.

About Mallikarjun

Check Also

screenshot 2025 10 25 17 53 12 59 6012fa4d4ddec268fc5c7112cbb265e7.jpg

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವದ ಪೂರ್ವಭಾವಿ ಸಭೆ

Preparatory meeting for the centenary celebrations of Shivaratri Rajendra Mahaswamy. ವರದಿ: ಬಂಗಾರಪ್ಪ .ಸಿ .ಹನೂರು : …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.