Mental health awareness program as part of World Suicide Prevention Day
ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 11 ರಂದು ಜಿಲ್ಲಾ ಕೇಂದ್ರದಲ್ಲಿ ಮಾನಸಿಕ ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಅಂದು ಬೆಳಿಗ್ಗೆ 11 ಗಂಟೆಗೆ ದದೇಗಲ್‌ನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ. ಮಾನಸಿಕ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಮಾನಸಿಕ ಅರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.