Monsoon season crop competition: Application submission period extended
ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 8 ರವರೆಗೆ ವಿಸ್ತರಿಸಲಾಗಿದೆ.
ಕೆ.ಕಿಸಾನ್ ತಂತ್ರಾAಶದಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಅರ್ಜಿಗಳನ್ನು ಆನ್‌ಲೈಣ್ ಮೂಲಕ ನೋಂದಣಿ ಮಾಡಲು ಬಾಕಿ ಇರುವ ಕಾರಣ ಅಂತಿಮ ದಿನಾಂಕವನ್ನು ವಿಸ್ತರಿಸಲು ಕೋರಲಾಗಿತ್ತು. ಅದರಂತೆ ಆಸಕ್ತ ರೈತ ಮತ್ತು ರೈತ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಅವಕಾಶವನ್ನು ಎಲ್ಲಾ ರೈತ ಬಾಂಧವರು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.