Koppal University Postgraduate Admission Process on 11th and 12th September: Notice to attend
ಕೊಪ್ಪಳ ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್ 11 ಮತ್ತು 12 ರಂದು ತಳಕಲ್ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿರುವ ಕೊಪ್ಪಳ ವಿ.ವಿ.ಯ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಅರ್ಜಿಗಳನ್ನು ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ಅರ್ಜಿದಾರರು ಸಂಬಂಧಪಟ್ಟ ಮೂಲ ದಾಖಲಾತಿಗಳನ್ನು ಪರಿಶೀಲನೆ ಪ್ರಕ್ರಿಯೆಗೆ ಬೇಕಾಗುವ ದಾಖಲೆಗಳನ್ನು ವಿಭಾಗದ ಮುಖ್ಯಸ್ಥರುಗಳಿಗೆ ಅಥವಾ ಸಂಯೋಜನಾಧಿಕಾರಿಗಳಿಗೆ ಸಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ತಮಗೆ ಬೇಕಾಗುವ ಮಹಾವಿದ್ಯಾಲಯಗಳಿಗೆ ಪ್ರವೇಶಾತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳು ಯುಯುಸಿಎಂಎಸ್ ನಲ್ಲಿ ಸಲ್ಲಿಸಿದ ಅರ್ಜಿಯ ಒಂದು ನಕಲು ಪ್ರತಿ, ಎಲ್ಲಾ ಅಂಕಪಟ್ಟಿಗಳು ಮತ್ತು ಮೀಸಲಾತಿ ಪ್ರಮಾಣ ಪತ್ರಗಳು (ಒರಿಜಿನಲ್ & ಒಂದು ಸೆಟ್ ಜೆರಾಕ್ಸ್), ಪ್ರವೇಶಾತಿಗೆ ಸಂಬಂಧಿಸಿದ ಪೂರ್ಣ ಶುಲ್ಕದೊಂದಿಗೆ ಹಾಜರಾಗಿ ಪ್ರವೇಶ ಪಡೆದುಕೊಳ್ಳಬೇಕೆಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.