ಸೆ. 15 ರಂದು ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Progress review meeting of taluka level guarantee schemes on Sept. 15
ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು. ಸಭೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೆ ಖುದ್ದಾಗಿ ಸಭೆಗೆ ಹಾಜರಾಗುವಂತೆ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article