ಕಲ್ಯಾಣಸಿರಿ ವಿಶೇಷ

ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಮೀಕ್ಷೆಗಳು ಅತ್ಯಂತ ಅಗತ್ಯ-ಪ್ರೊ. ಬಿ.ಕೆ. ರವಿ

Surveys are very important to understand the real conditions of society-Prof. B.K. Ravi


ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು
ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಸಮಾಜಮುಖಿ ಹೊಣೆಗಾರಿಕೆಯನ್ನು ಅರಿಯಲು ಅವಕಾಶ ದೊರೆಯುತ್ತದೆ. ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಮೀಕ್ಷೆಗಳು ಅತ್ಯಂತ ಅಗತ್ಯವಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಅವರು ಹೇಳಿದರು.
   ಕೊಪ್ಪಳ ವಿಶ್ವವಿದ್ಯಾಲಯ ಮತ್ತು ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ ಆಯೋಜಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾಗೃತಿ ಅಭಿಯಾನ – 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಸಂಗ್ರಹವಲ್ಲ, ಅವು ಸಮಾಜದ ದಿಕ್ಕು ತೋರಿಸುವ ದಾರಿದೀಪ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಾರ್ವಜನಿಕರ  ಸಮಸ್ಯೆಗಳ  ಪರಿಹಾರಕ್ಕೆ ಸಮೀಕ್ಷೆ ಮಾರ್ಗದರ್ಶಿಯಾಗುತ್ತದೆ ಎಂದರು.
*”ಕರ್ನಾಟಕ ರಾಜ್ಯ ಹಿಂದುಳಿದ  ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ  ನಮ್ಮ ಎಲ್ಲ ವಿದ್ಯಾರ್ಥಿಗಳು ಮನೆ ಮನೆಗೆ ತಲುಪಿ ಮಾಹಿತಿಯನ್ನು ನೀಡುವಂತೆ ಮನವೊಲಿಸುವ ಕೆಲಸವನ್ನು ಪ್ರತಿನಿಧಿಗಳಾಗಿ  ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು  ಪ್ರೊ. ಬಿ.ಕೆ ರವಿ ಕರೆ ನೀಡಿದರು”*
ಮುಖ್ಯ ಅತಿಥಿಗಳಾದ ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಅವರು ಮಾತನಾಡಿ ಸಮಾಜ ಮತ್ತು ಶಿಕ್ಷಣ ಪರಸ್ಪರ ಪೂರಕ. ಅಂಕಿಅಂಶಗಳ ಆಧಾರದ ಮೇಲೆ ಗ್ರಾಮೀಣಾಭಿವೃದ್ಧಿಗೆ ವೈಜ್ಞಾನಿಕ ದೃಷ್ಟಿಕೋನ ದೊರೆಯುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರೊ. ವೈ.ಬಿ. ಅಂಗಡಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಜನರ ಶಿಕ್ಷಣ, ಆರೋಗ್ಯ, ಜೀವನಮಟ್ಟ, ಆರ್ಥಿಕ ಪರಿಸ್ಥಿತಿ, ಸಾಮಾಜಿಕ ಹಿನ್ನಲೆ ಹಾಗೂ ಸರಕಾರಿ ಯೋಜನೆಗಳ ಅನುಷ್ಠಾನವನ್ನು ಸಮೀಕ್ಷೆಗಳ ಮೂಲಕ ಅಧ್ಯಯನ ಮಾಡಿದಾಗ, ಯೋಜನೆಗಳ ಪರಿಣಾಮಕಾರಿತ್ವ ಹೆಚ್ಚಲು ನೆರವಾಗುತ್ತದೆ. ಇಂತಹ ಸಮೀಕ್ಷೆಗಳು ಸಮಾಜದ ಬದಲಾವಣೆಗೆ ದಾರಿ ಮಾಡಿಕೊಡುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago