Breaking News

ಸೆ.20 ರಂದು ವಿದ್ಯಾರ್ಥಿಗಳಿಗಾಗಿ ಮ್ಯಾರಥಾನ್ ಸ್ಪರ್ಧೆ

Marathon competition for students on September 20
ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ನ್ಯಾಕೋ ಅವರ ಮಾರ್ಗಸೂಚಿಯಂತೆ ಹೆಚ್.ಐ.ವಿ./ಏಡ್ಸ್ ,ಕುರಿತು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ. ಮತ್ತು ಏಡ್ಸ್ (ತಡೆ) ಕಾಯ್ದೆ 2017, NACO AIDS APP, , ಉಚಿತ ರಾಷ್ಟಿçÃಯ ಸಹಾಯವಾಣಿ 1097, ಎಸ್‌ಟಿಐ, ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದ್ದು, ಅದರ ಅಂಗವಾಗಿ ಜಿಲ್ಲಾ, ರಾಜ್ಯ, ಪ್ರಾದೇಶಿಕ ಹಾಗೂ ರಾಷ್ಟçಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.
ಅದರಂತೆ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಡಳಿತ ಭವನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ 17-25 ವರ್ಷದ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬೇಕು. ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೊದಲ ಬಹುಮಾನ ರೂ.5,000/-, ದ್ವಿತೀಯ ಬಹುಮಾನ ರೂ.3,500/- ಹಾಗೂ ತೃತೀಯ ಬಹುಮಾನ ರೂ.2,500/- ಗಳನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ವಿಜೇತರಾದ ಮೊದಲನೇ ಬಹುಮಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಭಾಗವಹಿಸಬೇಕಾಗಿರುತ್ತದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪಿ.ಎಫ್.ಎಂ.ಎಸ್. ಮುಖಾಂತರ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿನ ಗುರುತಿನ ಚೀಟಿ, ಆಧಾರ್‌ಕಾರ್ಡ್ ಹಾಗೂ ಕಾಲೇಜಿನ ಪ್ರಾಂಶುಪಾಲರ ಧೃಢೀಕರಣ ಪತ್ರಗಳೊಂದಿಗೆ ಹಾಜರಾಗಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ದೈಹಿಕ ಆರೋಗ್ಯ ಅರ್ಹತಾ (‍Fitness Certificate) ಪ್ರಮಾಣಪತ್ರವನ್ನು ಕಡ್ಡಾಯವಾಗಿ ತರಬೇಕು. ತಪ್ಪಿದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುವುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9449846981, 9481732070 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಮಾಜಿ ದೇವದಾಸಿ ಮಹಿಳೆಯರ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಅಚ್ಚುಕಟ್ಟಾಗಿ ನಿರ್ವಹಿಸಿ- ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

Conduct a survey of former Devadasi women and gender minorities in a proper manner - …

Leave a Reply

Your email address will not be published. Required fields are marked *