Breaking News

ನೇಕಾರ ಸಮುದಾಯಗಳ ಒಕ್ಕೂಟ ದಿಂದ 224 ಕ್ಷೇತ್ರಗಳಲ್ಲಿ ಜಾತಿ ಗಣತಿ ಸಮೀಕ್ಷೆ ಮಾಡಲಾಗುವದು:ರಾಜ್ಯಾದ್ಯಕ್ಷ ಬಿ. ಎಸ್. ಸೋಮಶೇಖರ್

Caste census survey to be conducted in 224 constituencies by Weaver Communities Federation: State Secretary B. S. Somashekar

ಗಂಗಾವತಿ: ನೇಕಾರ ಸಮುದಾಯದಿಂದ ಕರ್ನಾಟಕ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸಿ ಸರಕಾರದ ಗಮನಕ್ಕೆ ತರಲಾಗುವದು ಎಂದು ನೇಕಾರ ಒಕ್ಕೂಟದ ರಾಜ್ಯಾದ್ಯಕ್ಷ ಬಿ. ಎಸ್ .ಸೋಮಶೇಖರ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಇಂದು ಶನಿವಾರ. ನಗರದ ನೀಲಕಮಟೇಶದವರ ದೇವಸ್ತಾನದ ಸಭಾಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ನಮ್ಮ ಸಮಾಜದ ಜನಸಂಖ್ಯೆ ಕೆವಲ ನಾಲ್ಕು ಲಕ್ಷ ಐವತ್ತು ಸಾವಿರ ಎಂದು ಆಯೋಗ ಹೇಳಿದೆ ಆದರೆ ಸುಮಾರು ನಾವು ಒಂಭತ್ತು ಲಕ್ಷ ಇಪ್ಪತ್ತೆಂಟು ಸಾವಿರ ಇದ್ದೇವೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ “ಜಾತಿಗಣತಿ” ವರದಿಯನ್ನು ನೇಕಾರ ಸಮುದಾಯವು ರಾಜ್ಯದಲ್ಲಿರುವ ನೇಕಾರ ಸಮುದಾಯಗಳ ಜನಸಂಖ್ಯೆಯನ್ನು ದಾಖಲಿಸುವಲ್ಲಿ ಆಯೋಗವು ಕೈಗೊಂಡಿರುವ ಕ್ರಮವು ಅವೈಜ್ಞಾನಿಕವಾಗಿದೆ. ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಅಂಕಿ-ಅಂಶಗಳು ಸಮುದಾಯಕ್ಕೆ ದೊಡ್ಡ ಆಘಾತವನ್ನು ತಂದೊಡ್ಡಿದೆ.

ರಾಜ್ಯದ ನೇಕಾರ ಸಮುದಾಯವು ವರದಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೇಕಾರ ಸಮುದಾಯಗಳ ಮಠಾದೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರುಗಳು ಸುಮಾರು ಐದಾರು ಸಭೆಗಳನ್ನು ನಡೆಸಿ ಮರು ಸಮೀಕ್ಷೆಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ.

ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯದ ನಿಖರ ಜನಸಂಖ್ಯೆಯನ್ನು ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ತನ್ನದೇ ಆದ “ಆಪ್” ಅನ್ನು ಸಿದ್ದಪಡಿಸಿದೆ. ಈ ಆಪ್ ಮೂಲಕ ರಾಜ್ಯದಲ್ಲಿರುವ ನೇಕಾರರು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರುಗಳ ಮಾಹಿತಿಯನ್ನು ಒದಗಿಸಲು ಅನುಕೂಲ ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ರಾಜ್ಯಾದ್ಯಂತ ಜಿಲ್ಲಾವಾರು ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸಮುದಾಯದವರ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಿದ್ದು, ಸ್ಥಳೀಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮೂಲಕ ನೇಕಾರರನ್ನು ಸಂಪರ್ಕಿಸಿ ಕುಟುಂಬ ಸದಸ್ಯರುಗಳ ಅಂಕಿ ಅಂಶಗಳನ್ನು ಸಂಗ್ರಹಿಸಿ ಆಪ್‌ನಲ್ಲಿ ಅವುಗಳನ್ನು ದಾಖಲಿಸಲಾಗುವುದು ಎಂದರು. ಈ ಸಂದರ್ಬದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷ ಕೆ ಕಾಳಪ್ಪ ,, ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನ ನಾಗಪ್ಪ,ಮಹೊಳಾಘಟಕದ ಅದ್ಯಕ್ಷೆ ಉಮಾ ಜಗದೀಶ್,ರಾಜ್ಯ ಪದಾಧಿಕಾರಿಗಳಾದ ಹೇಮಲತಾ,ರುಕ್ಮಿಣಿ ಗಣೇಶ್,ಉಮಾದೆವಿ,ಜೋತಿ ಕೃಷ್ಣ ಸರೋದಯ,ಲಕ್ಷ್ಮಿ ಗೌಡರ್,ನವಿನ ಚಿಲ್ಲಾಳ,ದಯಾನಂದ ಶಿವಶಕ್ರಪ್ಪ ಚೆನ್ನಿ ಮುಂತಾದವರ ಇದ್ದರು.

About Mallikarjun

Check Also

ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು

Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು …

Leave a Reply

Your email address will not be published. Required fields are marked *