District level karate competition: Four students of Akshara Public School win first place ಕೊಪ್ಪಳ: ದಿನಾಂಕ.11-9-2025 ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳದಲ್ಲಿ ನಡೆದ ಜಿಲ್ಲಾ ಪಂಚಾಯತ್ ಕೊಪ್ಪಳ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಹಾಗೂ ನ್ಯಾಷನಲ್ ಸ್ಟ್ರೀಟ್ ಕರಾಟೆ ಅಕಾಡೆಮಿ ಕೊಪ್ಪಳ ಇವರ ಸಂಯೋಗದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳ ಕರಾಟೆ ಸ್ಪರ್ಧೆಯಲ್ಲಿ ಗಂಗಾವತಿ ನಗರದ ಅಕ್ಷರ ಪಬ್ಲಿಕ್ ಸ್ಕೂಲ್ ಬಾಲಕರ ವಿಭಾಗದಲ್ಲಿ ಕಿಶೋರ್ ಕುಮಾರ 45 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ.ವೀವಂತ್ ಗೌಡ 55 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ.ಸುಮಿತ್ ಶೆಟ್ಟಿ 58 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ. ಬಾಲಕಿಯರ ವಿಭಾಗದಲ್ಲಿ
ಸಿಂಚನ 30 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ. ಲಿಖಿತ 46 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ.ನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳು ಪಾಠದ ಜೊತೆಗೆ ಬಿಡುವಿನ ವೇಳೆಯಲ್ಲಿ ಕರಾಟೆ ಕಲಿಯುವುದರಿಂದ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆ ಸಹಕಾರಿಯಾಗುತ್ತದೆ.ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಆತ್ಮ ಧೈರ್ಯವನ್ನು ತುಂಬುತ್ತದೆ ಹಾಗೂ ನಮ್ಮ ಶಾಲೆಯಿಂದ ಕರಾಟೆ ತರಬೇತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ನಮ್ಮ ಶಾಲೆಗೆ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಮುಖ್ಯೋಪಾಧ್ಯಾಯನಿ ಸತಿ ಹೀಮಾ ರವಿ ಚೈತನ್ಯ ರೆಡ್ಡಿ ಅಭಿನಂದಿಸಿ ಹೇಳಿದರು.ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಸ್ಥ ರಾದ ರವಿ ಚೈತನ್ಯ ರೆಡ್ಡಿ ಶುಭಕೋರಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ತಿಮ್ಮಪ್ಪ. ನ್ಯೂ ಬ್ರೈಟ್ ಕರಾಟೆ ಅಕಾಡೆಮಿ ಮುಖ್ಯಸ್ಥರು ಮತ್ತು ಶಿಕ್ಷಕರಾದ ಅನ್ವರ್ ಪಾಷಾ ಶಾಲೆಯ ಶಿಕ್ಷಕರ ವೃಂದದಿಂದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…