Transport court in Koppal on Sept. 20
ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಸಾರಿಗೆ ಇಲಾಖೆಗೆ ಸಂಬAಧಿಸಿದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕರಿಸಲು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಎಸ್.ಕೆ. ಪಾಟೀಲ್ ಬಡಾವಣೆಯಲ್ಲಿರುವ ಆರ್.ಟಿ.ಓ ಕಚೇರಿಯಲ್ಲಿ ಸೆಪ್ಟೆಂಬರ್ 20 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ




