Vaddarahatti: E-KYC mandatory for NREGA employment cards - PDO Suresh Chalwadi instructs
ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡಗಳಲ್ಲಿರುವ ಎಲ್ಲ ಸದಸ್ಯರು ಸೆಪ್ಟೆಂಬರ್ 30ರ ಒಳಗಾಗಿ ಇ-ಕೆವೈಸಿ ಹೊಂದುವುದು ಕಡ್ಡಾಯವಾಗಿದೆ ಎಂದು
ವಡ್ಡರಹಟ್ಟಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಪ್ರತಿಯೊಬ್ಬರ ಏಣಿಕೆ ಮೂಲಕ ಎನ್ ಎಂ ಎಂ ಎಸ್ (NMMS) ಹಾಜರಾತಿ ಸಂಖ್ಯೆ ಆನ್ ಲೈನ್ ತೆಗೆದುಕೊಳ್ಳುತ್ತಿದ್ದು, ಇ-ಕೆವೈಸಿ ಹೊಂದಿರುವರು ಅವರ ಹಾಜರಾತಿ ತೆಗೆದುಕೊಳ್ಳುವಾಗ ಅವರ ಆಧಾರ್ ನಂಬರ್ ಮತ್ತು ಸ್ಥಳದಲ್ಲಿ ಹಾಜರಿದ್ದವರ ಮುಖ ಹೊಂದಾಣಿಕೆಯಾಗಿದ್ದಲ್ಲಿ ಮಾತ್ರ ಅವರ ಎನ್ ಎಂ ಎಂ ಎಸ್ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.



ಗ್ರಾ.ಪಂ. ವ್ಯಾಪ್ತಿಯ ವಡ್ಡರಹಟ್ಟಿ, ವಡ್ಡರಹಟ್ಟಿ ಕ್ಯಾಂಪ್, ಗದ್ವಾಲ್ ಕ್ಯಾಂಪ್, ಆರ್ಹಾಳ, ಗುಡ್ಡದಕ್ಯಾಂಪ್ ಸೇರಿ ಒಟ್ಟು 6414 ಸಕ್ರಿಯ ನರೇಗಾ ಕೂಲಿಕಾರರಿದ್ದು, ಎಲ್ಲರೂ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಪ್ರತಿಯೊಬ್ಬ ನರೇಗಾ ಕೂಲಿಕಾರರು ತಪ್ಪದೇ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸದೇ ಇರುವಂತಹ ಕೂಲಿಕಾರರ ಎನ್ ಎಂಎಂಎಸ್ ನಲ್ಲಿ ಹಾಜರಾತಿಯನ್ನು ಅಕ್ಟೋಬರ್, 01 ರಿಂದ ಆನ್ ಲೈನ್ ನಲ್ಲಿ ತೆಗೆದುಕೊಳ್ಳುವುದಿಲ್ಲ. ತುರ್ತಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಎಲ್ಲಾ ಕೂಲಿಕಾರರು ನಿಮ್ಮ ಆಧಾರ ಕಾರ್ಡ್ ಹಾಗೂ ಉದ್ಯೋಗ ಚೀಟಿಯೊಂದಿಗೆ ನಿಮ್ಮ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಹೊಂದಬೇಕೆಂದು ವಡ್ಡರಹಟ್ಟಿ ಗ್ರಾಪಂ ಪಿಡಿಓ ಸುರೇಶ ಚಲವಾದಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.