Akbar appointed as Congress district general secretary
ಕೊಪ್ಪಳ: ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ, ಹಾಲಿ ಸದಸ್ಯ, ಹಿರಿಯ ಕಾಂಗ್ರೆಸ್ಸಿಗ ಅಕ್ಬರ್ ಪಾಶಾ ಪಲ್ಟನ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಡಿಸಿಸಿ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ಆದೇಶ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್. ಬಿ. ನಾಗರಳ್ಳಿ, ಕಾಂಗ್ರೆಸ್ ನಾಯಕಿ ಜ್ಯೋತಿ ಗೊಮಡಬಾಳ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಮುಖಂಡರುಗಳಾದ ಸುರೇಶ ದಾಸರಡ್ಡಿ, ವಿಶಾಲಾಕ್ಷಿ ತಾವರಗೇರಿ, ಸುಮಂಗಲಾ ನಾಯಕ, ಸೌಭಾಗ್ಯ ಗೊರವರ, ಅನಿತಾ ಅಳ್ಳಮ್ಮನವರ, ನವೋದಯ ವಿರುಪಾಕ್ಷಪ್ಪ ಇತರರು ಇದ್ದರು.
Kalyanasiri Kannada News Live 24×7 | News Karnataka

