Breaking News

ಅರೆಕಾಲಿಕ ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

Applications are invited for the post of part-time volunteer.
ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಕರ್ನಾಟಕದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಸೇವಾ ಸಮಿತಿಗಳಾದ ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ವ್ಯಾಪ್ತಿಯಲ್ಲಿ ಅರೆಕಾಲಿಕ ಸ್ವಯಂ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರು ಅರೆಕಾಲಿಕ ಸ್ವಯಂ ಸೇವಕರ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದು.
ಸೇವಾ ಮನೋಭಾವನೆ ಹೊಂದಿರುವ ಕೊಪ್ಪಳ ತಾಲ್ಲೂಕಿನಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಗೆ ಹಾಗೂ ಉಳಿದ ತಾಲೂಕುಗಳ ಅಭ್ಯರ್ಥಿಗಳು ಆಯಾ ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿರುವ ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಕಛೇರಿಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಅಕ್ಟೋಬರ್ 4 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

About Mallikarjun

Check Also

ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಸಂಭ್ರಮ.

Sharannavarathri celebrations for Shri Sharadambrama ಗಂಗಾವತಿ: ಸರ್ವ ಜನಾಂಗದ ಮಹಿಳೆಯರ ಪಾಲ್ಗೊಳ್ಳುವಿಕೆಯಿಂದಾಗಿ ಶಾರದಾ ಶರನ್ನವರಾತ್ರಿಯ ಪ್ರಥಮ ದಿನದಂದು ದಾಖಲೆಯ …

Leave a Reply

Your email address will not be published. Required fields are marked *