Breaking News

ಮಹಿಳೆಯರು ತಮ್ಮ ಕುಟುಂಬದ ಪೋಷಣೆಯೊಂದಿಗೆ ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಡಿಎಚ್‌ಒ ಡಾ.ಲಿಂಗರಾಜು

Women should prioritize their health along with nurturing their family: DHO Dr. Lingaraju
Screenshot 2025 09 24 18 52 26 40 E307a3f9df9f380ebaf106e1dc980bb63662926775289751485
ಕೊಪ್ಪಳ ಸೆಪ್ಟೆಂಬರ್ 24 (ಕರ್ನಾಟಕ ವಾರ್ತೆ): ಮಹಿಳೆಯರು ತಮ್ಮ ಕುಟುಂಬದ ಪೋಷಣೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಆದರೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡುವುದಿಲ್ಲ. ಆದ್ದರಿಂದ ಕುಟುಂಬದ ಪೋಷಣೆಯೊಂದಿಗೆ ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಿದರೆ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಹಿರೇವಂಕಲಕುAಟಾ ಇವರ ಸಂಯುಕ್ತಾಶ್ರಯದಲ್ಲಿ ಸೆ.23 ರಂದು ಹಿರೇವಂಕಲಕುAಟಾ ಗ್ರಾಮದ ಆಸ್ಪತ್ರೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮ ಹಾಗೂ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗೃಹಿಣಿ ಅಥವಾ ಉದ್ಯೋಗಸ್ಥ ಮಹಿಳೆ, ಯಾರೇ ಆದರೂ ತಮ್ಮ ಕುಟುಂಬದ ಪೋಷಣೆಗೆ ಮೊದಲ ಆದ್ಯತೆ ನೀಡುತ್ತಾರೆ. ಮನೆ ಕೆಲಸ, ಮಕ್ಕಳ, ಕುಟುಂಬದ ಪೋಷಣೆ ಹಾಗೂ ಉದ್ಯೋಗದ ಜವಾಬ್ದಾರಿಗಳ ನಡುವೆ ವೈಯಕ್ತಿಕವಾಗಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಕಡಿಮೆ. ಆದರೆ ಮನೆಯ ಮೂಲ ಆಧಾರ ಸ್ತಂಭವಾದ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಮೊದಲ ಆದ್ಯತೆ ನೀಡಿ, ತಾವು ಆರೋಗ್ಯವಂತರಾದರೆ ಇಡೀ ಕುಟುಂಬ, ಸಮಾಜ ಆರೋಗ್ಯಪೂರ್ಣವಾಗಿರುತ್ತದೆ ಎಂದು ಅವರು ಹೇಳಿದರು.
ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಎಲ್ಲಾ ಮಹಿಳೆಯರಿಗಾಗಿ ವೈದ್ಯಕೀಯ ಪರೀಕ್ಷೆ ಮತ್ತು ಆರೋಗ್ಯ ಸೇವೆಗಳನ್ನು ನೀಡಲು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ವರೆಗೆ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಜಾಗೃತಿ ಕಾರ್ಯಕ್ರಮ ಮತ್ತು ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡು ಚಿಕಿತ್ಸೆ ನೀಡಲಾಗುತ್ತದೆ. ಮಹಿಳೆಯರ ಆರೋಗ್ಯ ರಕ್ಷಣೆ ಕುರಿತು ಸರ್ಕಾರ ಹೊಸದಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಮಹಿಳೆಯರಿಗೆ ಅಧಿಕ ರಕ್ತದೊತ್ತಡ(ಬಿ.ಪಿ), ಮಧುಮೇಹ, ಕ್ಯಾನ್ಸರ್ ನಂತಹ ಖಾಯಿಲೆ ತಪಾಸಣೆ, ರಕ್ತಹೀನತೆ ಮತ್ತು ಕ್ಷಯರೋಗ(ಟಿ.ಬಿ) ಕಾಯಿಲೆಗಳ ಪರೀಕ್ಷೆ, ಗರ್ಭಿಣಿಯರಿಗೆ ಪ್ರಸವಪೂರ್ವ ತಪಾಸಣೆ, ಮಕ್ಕಳಿಗೆ ಲಸಿಕಾ ಸೌಲಭ್ಯಗಳು ಕುರಿತು ಸೇವೆ ನೀಡಲಾಗುತ್ತದೆ. ಬೊಜ್ಜು ತಡೆಗಟ್ಟಲು ಸಕ್ಕರೆ ಮತ್ತು ಎಣ್ಣೆ ಖಾದ್ಯಗಳ ಸೇವನೆ ಕಡಿಮೆ ಮಾಡಲು ಒತ್ತು ನೀಡುವುದು, ಬಾಲ್ಯದ ಆರೈಕೆ ಮತ್ತು ಶಿಕ್ಷಣ, ಪೋಷಣೆ ಮತ್ತು ಶಿಕ್ಷಣ, ಶಿಶು ಮತ್ತು ಎಳೆಯ ಮಕ್ಕಳಿಗೆ ಆಹಾರ ನೀಡುವ ಪದ್ದತಿಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಪೋಷಣೆ ಮತ್ತು ಆರೈಕೆಯಲ್ಲಿ ಪುರುಷರ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು. ಸ್ಥಳೀಯ ಪೌಷ್ಠಿಕ ಆಹಾರ ಸಂಪನ್ಮೂಲಗಳ ಪ್ರಚಾರ ಒಗ್ಗೂಡಿಸುವಿಕೆ ಮತ್ತು ಡಿಜಿಟಲೀಕರಣ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗಳ ಸೌಲಭ್ಯ ಪಡೆದುಕೊಂಡು ಒಂದು ಸುಂದರವಾದ ಆರೋಗ್ಯವಂತ ದೇಶ ಕಟ್ಟಲು ಸಹಕರಿಸಬೇಕೆಂದು ತಿಳಿಸಿದರು. ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ ತಮ್ಮ ಸಮೀಪದ ಆಯುಷ್ಮಾನ್ ಆರೋಗ್ಯ ಕೇಂದ್ರ, ಸಮುದಾಯ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಬಹುದೆಂದು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್ ಅವರು ಕುಟುಂಬ ಕಲ್ಯಾಣ ಕಾರ್ಯಕ್ರಮದ ತಾತ್ಕಾಲಿಕ ಮತ್ತು ಶಾಶ್ವತ ವಿಧಾನಗಳು, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಶಿಕ್ಷಾರ್ಹ ಅಪರಾಧ, ಆರೋಗ್ಯವಂತ ಕುಟುಂಬವನ್ನು ನಡೆಸಲು ಜೀವನ ಕೌಶಲ್ಯ ಅಳವಡಿಸಿಕೊಳ್ಳುವ ಕುರಿತು ವಿವರವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡು ಚಿಕಿತ್ಸೆ ನೀಡಲಾಯಿತು ಮತ್ತು ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ವಸ್ತು ಪ್ರದರ್ಶನ ವಿಭಾಗ ಏರ್ಪಡಿಸಿ, ಕರಪತ್ರ ನೀಡುವುದರ ಮೂಲಕ ಮಾಹಿತಿ ನೀಡಲಾಯಿತು ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳ ಅನುಷ್ಠಾಣಾಧಿಕಾರಿಗಳಾದ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಪ್ರಕಾಶ ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ಕುಷ್ಠರೋಗ ನಿರ್ಮೂಲಣಾ ಅಧಿಕಾರಿ ಡಾ. ಪ್ರಕಾಶ ಹೆಚ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗೋನಾಳು ಕುಮಾರಸ್ವಾಮಿ, ಸ್ತಿçÃರೋಗ ತಜ್ಞರಾದ ಡಾ. ಈಶ್ವರ ಸವಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹುಲಿಗೆಮ್ಮ ತಳವಾರ, ಉಪಾಧ್ಯಕ್ಷರಾದ ಮಂಜುನಾಥ ಶಾಸ್ತಿçಮಠ, ತಾಲೂಕಾ ಆರೋಗ್ಯಾಧಿಕಾರಿ ಡಾ. ನೇತ್ರಾವತಿ, ಆಡಳಿತ ವೈದ್ಯಾಧಿಕಾರಿಗಳಾದ ಡಾ.ದಯಾನಂದ ಸ್ವಾಮಿ, ಅರವಳಿಕೆ ತಜ್ಞರಾದ ಡಾ. ಸುಜಾತ, ಡಾ. ತುಳಜೆರಾಮ್ ಘಾಟಗೆ ಹಾಗೂ ವಿವಿಧ ತಜ್ಞವೈದ್ಯರು, ವೈದ್ಯಾಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿಗಳು, ವಿವಿಧ ವೃಂದದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

About Mallikarjun

Check Also

screenshot 2025 10 07 20 38 18 90 a71c66a550bc09ef2792e9ddf4b16f7a.jpg

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

Many of my deepfake videos are circulating everywhere: Nirmala Sitharaman ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.