Breaking News

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ

Make necessary preparations for Shri Maharishi Valmiki Jayanti - Dr. Suresh B. Itnal

Screenshot 2025 09 25 18 46 13 49 E307a3f9df9f380ebaf106e1dc980bb65301524037899889629

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ

ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಅಕ್ಟೋಬರ್ 7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ವಾಲ್ಮೀಕಿ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಅ. 7 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ವೇದಿಕೆ ಕಾರ್ಯಕ್ರಮ, ಪೂಜೆ, ಶ್ರೀ ಮಹರ್ಷಿ ವಾಲ್ಮೀಕಿ ರವರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ಜರುಗಲಿವೆ. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು. ಸಮಾರಂಭಕ್ಕೂ ಪೂರ್ವದಲ್ಲಿ ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಸಿರಸಪ್ಪಯ್ಯನ ಮಠದಿಂದ ಸಾಹಿತ್ಯ ಭವನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಮೆರವಣೆಗೆ ಹೊರಡುವ ಮಾರ್ಗದಲ್ಲಿ ಮತ್ತು ಸಾಹಿತ್ಯ ಭವನದಲ್ಲಿ ನಗರಸಭೆಯಿಂದ ಸ್ವಚ್ಛತಾ ಕಾರ್ಯವಾಗಬೇಕು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಮಾಡಿಕೊಡಬೇಕು. ಮೇರವಣಿಗೆಗೆ ವಿಶೇಷ ಕಲಾತಂಡಗಳನ್ನು ಕರೆತಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಗ್ರಾಮ ಪಂಚಾಯತ್ ಮತ್ತು ಇತರೆ ಕಛೇರಿಗಳಲ್ಲಿ ಆಚರಿಸುವಂತಾಗಬೇಕು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಜಯಂತಿ ಕಾರ್ಯಕ್ರಮದಲ್ಲಿ ಎಲ್ಲಾ ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅರ್ಥಪೂರ್ಣವಾಗಿ ಆಗಬೇಕು. ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ಹಿರಿಯರನ್ನು ಗುರುತಿಸಿ, ಗೌರವಿಸಬೇಕು. ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷಿಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಂ ಶೆಟ್ಟಪ್ಪನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ವಾಲ್ಮೀಕಿ ಸಮಾಜದ ಮುಖಂಡರಾದ ಶಂಕರಗೌಡ ಪಾಟೀಲ್, ಸುರೇಶ ಡೊಣ್ಣಿ, ಕೊಟೇಶ್ ತಳವಾರ, ವೆಂಕಟೇಶ್ ಪೂಜಾರ, ಲಕ್ಷ್ಮಣ ಚೌಡ್ಕಿ, ಶ್ರೀನಿವಾಸ ಗಿಣಿಗೇರಾ, ಶರಣಪ್ಪ ನಾಯಕ, ಗಿರಿಯಪ್ಪ ನಿಂಗಪ್ಪ ಡಂಬ್ರಳ್ಳಿ ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು

About Mallikarjun

Check Also

screenshot 2025 10 08 14 35 16 68 6012fa4d4ddec268fc5c7112cbb265e7.jpg

 ಸಾಯಿನಗರದ ಡಾ,ಅಂಬೇಡ್ಕರ್  ಬಾಲಕರ ವಸತಿ ನಿಯಲದಲ್ಲಿ ಮೂಲಬುತ ತಿನ್ನುವ ಅಹಾರ ಕಲಪೆ ಕೊಡತ್ತಿರುವದನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ   ಹುಲಗಪ್ಪ ಕೊಜ್ಜಿ  ಮನವಿ ಸಲ್ಲಿಸಿದರು

Hulagappa Kojji submitted a petition to the Social Welfare Department officials condemning the fact that …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.