Breaking News

ಇಂದು ಆನೆಗೊಂದಿಯಿಂದ ಅಂಜನಾದ್ರಿವರೆಗೆ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ

Plastic-free awareness rally from Anegondi to Anjanadri today

Screenshot 2025 09 25 18 33 31 05 680d03679600f7af0b4c700c6b270fe76883237539904972673

ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025
ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025ರ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ 6.30 ಗಂಟೆಗೆ ಆನೆಗೊಂದಿ ಗ್ರಾಮದ ಗಗನ್ ಮಹಲ್‌ದಿಂದ ಪಂಪಾ ಸರೋವರ ಮಾರ್ಗವಾಗಿ ಅಂಜನಾದ್ರಿ ಬೆಟ್ಟದವರೆಗೆ ಪ್ಲಾಗ್ (PLOG) ರನ್ ಮೂಲಕ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಥಾ ಹಾಗೂ ಬೆಳಿಗ್ಗೆ 8 ಗಂಟೆಗೆ ಅಂಜನಾದ್ರಿ ಬೆಟ್ಟದ ಪಾರ್ಕಿಂಗ್ ಸ್ಥಳದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಉದ್ಘಾಟಿಸುವರು. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು.
ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ ಹಾಗೂ ಆನೆಗೊಂದಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹುಲಿಗೆಮ್ಮ ಹೊನ್ನಪ್ಪ ನಾಯಕ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಬೆಂಗಳೂರು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ದೀಪಾ ಚೋಳನ್, ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾದ ಅಕ್ರಂ ಪಾಶಾ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅವರು ಉಪಸ್ಥಿತರಿರುವರು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಡಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

——————-

ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗವಿಶಂಕರ್.ಕೆ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಜಿಟಿಟಿಸಿ ಪ್ರಾಂಶುಪಾಲರು, ವಿಟಿಯು ಕೌಶಲ್ಯ ತರಬೇತಿ ಕೇಂದ್ರ ತಳಕಲ್‌ನ ಉಪನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

About Mallikarjun

Check Also

screenshot 2025 10 08 14 35 16 68 6012fa4d4ddec268fc5c7112cbb265e7.jpg

 ಸಾಯಿನಗರದ ಡಾ,ಅಂಬೇಡ್ಕರ್  ಬಾಲಕರ ವಸತಿ ನಿಯಲದಲ್ಲಿ ಮೂಲಬುತ ತಿನ್ನುವ ಅಹಾರ ಕಲಪೆ ಕೊಡತ್ತಿರುವದನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ   ಹುಲಗಪ್ಪ ಕೊಜ್ಜಿ  ಮನವಿ ಸಲ್ಲಿಸಿದರು

Hulagappa Kojji submitted a petition to the Social Welfare Department officials condemning the fact that …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.