Breaking News

ಮಕ್ಕಳ ಕ್ಷೇತ್ರದಲ್ಲಿ ಸಾಧನೆ, ಸಾಹಸ ಮಾಡಿದ ಮಕ್ಕಳು, ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

State awards for children, individuals and organizations who have made achievements and ventures in the field of children: Applications invited
ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6-18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಪ್ರಕರಣವು ದಿನಾಂಕ: 01.08.2024 ರಿಂದ 31.07.2025 ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಅರ್ಹರು ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬAಧಿಸಿದ ಜಿಲ್ಲೆಯ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಅಕ್ಟೋಬರ್ 4 ರೊಳಗೆ ಕಛೇರಿ ವೇಳೆಯಲ್ಲಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 10 08 14 35 16 68 6012fa4d4ddec268fc5c7112cbb265e7.jpg

 ಸಾಯಿನಗರದ ಡಾ,ಅಂಬೇಡ್ಕರ್  ಬಾಲಕರ ವಸತಿ ನಿಯಲದಲ್ಲಿ ಮೂಲಬುತ ತಿನ್ನುವ ಅಹಾರ ಕಲಪೆ ಕೊಡತ್ತಿರುವದನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ   ಹುಲಗಪ್ಪ ಕೊಜ್ಜಿ  ಮನವಿ ಸಲ್ಲಿಸಿದರು

Hulagappa Kojji submitted a petition to the Social Welfare Department officials condemning the fact that …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.