ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

Koppal RSETI: Applications invited for various trainings
ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಸ್ಟೇಟ್್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿವಿಧ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಿAದ 13 ದಿನಗಳ ಕೃಷಿ ಉದ್ಯಮಿ(ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ, 13 ದಿನಗಳ ಅಣಬೆ ಬೇಸಾಯ ತರಬೇತಿ, 30 ದಿನಗಳ ಬ್ಯೂಟಿ ಪಾರ್ಲರ್ ತರಬೇತಿ ಹಾಗೂ 31 ದಿನಗಳ ಮಹಿಳಾ ಹೊಲಿಗೆ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಬ್ಯಾಂಕಿನಿAದ ಸಾಲ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಕ್ಟೋಬರ್ 6 ರಂದು ಸಂದರ್ಶನ ನಡೆಯಲಿದ್ದು, ಅ.7 ರಂದು ತರಬೇತಿ ಪ್ರಾರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ರಿಂದ 45 ವರ್ಷದ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.
ಆಸಕ್ತರು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್‌ಕಾರ್ಡ್, ಎಸ್‌ಬಿಐ ಬ್ಯಾಂಕ್ ಪಾಸ್‌ಬುಕ್, ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳು ಹಾಗೂ ಪಾಸ್‌ಪೋರ್ಟ್ ಅಳತೆಯ 3 ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂ.ಸಂ.: 08539-231038, 9483618178, 7259073827, 9538096796, 9481085217 ಗೆ ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Mallikarjun

Share
Published by
Mallikarjun

Recent Posts

ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ ಅಭ್ಯರ್ಥಿಗಳಿಗೆ ಅವಕಾಶ

Kanakagiri: Private candidates allowed to apply for ITI admission ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ…

4 hours ago

ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Applications invited for Refrigeration, Air Conditioning & Sheep Farming Training ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ…

4 hours ago

4 hours ago

ಗಂಗಾವತಿ: ಐಟಿಐ ಪ್ರವೇಶಕ್ಕೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Gangavathi: Applications invited from private candidates for ITI admissions ಗಂಗಾವತಿ: ಐಟಿಐ ಪ್ರವೇಶಕ್ಕೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ…

4 hours ago

ಲೋಕ ಅದಾಲತ್‌ನಲ್ಲಿ 49,953 ಪ್ರಕರಣಗಳ ಇತ್ಯರ್ಥ

49,953 cases disposed of in Lok Adalat ಲೋಕ ಅದಾಲತ್‌ನಲ್ಲಿ 49,953 ಪ್ರಕರಣಗಳ ಇತ್ಯರ್ಥ ಕೊಪ್ಪಳ ಮಾರ್ಚ್ 16…

4 hours ago

ಯಾವ ಹಣ್ಣುಗಳು ಆರೋಗ್ಯಕ್ಕೆ ಉತ್ತಮ?

Which fruits are good for health? Which fruits are good for health? ಯಾವ ಹಣ್ಣುಗಳು ಆರೋಗ್ಯಕ್ಕೆ…

5 hours ago