Dasara Poetry Celebration Program on September 30th at Koppal University
ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದಿಂದ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10:30 ಗಂಟೆಗೆ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್‌ನಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಸಮಾರಂಭಕ್ಕೆ ಉದ್ಘಾಟಕರಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಮಲ್ಲಿಕಾ ಘಂಟಿ ಅವರು ಆಗಮಿಸುವರು. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಕಲ್ಯಾಣ ವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡುವರು.
ಮುಖ್ಯ ಅತಿಥಿಗಳಾಗಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ವೆAಕಟೇಶ್ವರಲು, ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ರಾಯಚೂರಿನ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಉಡಿಕೇರಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಮೇಶ ಬಿ., ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ, ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಓಂಕಾರ ಕಾಕಡೆ ಆಗಮಿಸುವರು.
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಹೆಚ್.ಎಲ್.ಪುಷ್ಪಾ ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸುವರು. ಸುಮಾರು 50 ಕ್ಕೂ ಹೆಚ್ಚು ಕವಿಗಳು ಕವನ ವಾಚಿಸುವರು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.