Inauguration of Koppal District Building and Other Construction Workers' Association
ಗಂಗಾವತಿ: ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾದ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಉದ್ಘಾಟನೆಯನ್ನು ಸೆಪ್ಟೆಂಬರ್-೨೮ ಭಾನುವಾರ ನಗರದ ಚಲುವಾದಿ ಓಣಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಭಾರಧ್ವಾಜ್ ತಿಳಿಸಿದರು.
ಈ ಸಂಘದ ಉದ್ಘಾಟನೆಯನ್ನು ಈ ಮೊದಲು ಆಟೋನಗರದ ಕ್ರಾಂತಿಕೇAದ್ರದಲ್ಲಿ ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ ಮಳೆಯ ಕಾರಣದಿಂದಾಗಿ ಉದ್ಘಾಟನಾ ಸಮಾರಂಭವನ್ನು ನಗರದ ಮಧ್ಯಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಈ ಸಮಾರಂಭ ಉದ್ಘಾಟನೆಯನ್ನು ಹಿರಿಯ ಹೈಕೋರ್ಟ್ ವಕೀಲರಾದ ಎಸ್. ಬಾಲನ್ ಅವರು ಮಾಡಲಿದ್ದು, ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಸಿ.ಹೆಚ್. ನಾರಿನಾಳ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಕಡೆಗಳಿಂದ ಗಣ್ಯರು, ಪ್ರಗತಿಪರರು ಭಾಗವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಸಂಘ-ಸAಸ್ಥೆಗಳು, ಸಾರ್ವಜಿನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದರು.