Breaking News

ಮೂರು ದಿನ ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಮುಕ್ತಾಯ ಸಿಲತ್ ಕ್ರೀಡೆಗೆ ರಾಜ್ಯ ಸರಕಾರ ಮಾನ್ಯತೆ : ಸಚಿವ ತಂಗಡಗಿ ಭರವಸೆ

Three-day Pencak Silat National Games concludes, state government recognizes Silat sport: Minister Thangadgi assures

Screenshot 2025 09 29 21 33 15 61 E307a3f9df9f380ebaf106e1dc980bb62816758029242425561

ಕೊಪ್ಪಳ: ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸಂಸ್ಥೆಯನ್ನು ಹೊಂದಿರುವ ಪೆಂಕಾಕ್ ಸಿಲತ್ ಕ್ರೀಡೆಗೆ ಸಿಎಂ ಅವರ ಹಂತದಲ್ಲಿ ಬಾಕಿ ಇರುವ ಮಾನ್ಯತೆಯನ್ನು ಜಿಲ್ಲೆಯ ಶಾಸಕರೊಂದಿಗೆ ಸಿಎಂ ಬಳಿ ವಿವಿರಿಸಿ ಮಾನ್ಯತೆ ಕೊಡಿಸುವದಾಗಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಭರವಸೆ ನೀಡಿದರು.
ಅವರು ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆದ ೧೩ನೇ ರಾಷ್ಟಿçÃಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ತಾವೂ ಒಬ್ಬ ಕ್ರೀಡಾಪಟುವಾಗಿದ್ದು, ಬರುವ ದಿನಗಳಲ್ಲಿ ಕ್ರೀಡೆಗೆ ಇನ್ನಷ್ಟು ಒತ್ತು ನೀಡಿ ಸಹಕಾರ ಕೊಡುವದಾಗಿ ಮತ್ತು ಕ್ರೀಡೆಯಿಂದ ಮನುಷ್ಯ ಹೆಚ್ಚು ಬೆಳಗುತ್ತಾನೆ, ಆರೋಗ್ಯಕ್ಕೂ ಒಳ್ಳೆಯದು ಮತ್ತು ಅವಕಾಶಕ್ಕೂ ಒಳ್ಳೆಯದು, ಜಿಲ್ಲೆಯ ಕ್ರೀಡಾಪಟುಗಳು ಇನ್ನಷ್ಟು ಸಾಧನೆ ಮಾಡಲಿ ಎಂದರು.
ಮಾತನಾಡಿ, ಕರ್ನಾಟಕದ ಸಣ್ಣ ಜಿಲ್ಲೆಯಲ್ಲಿ ಇಂತಹ ಕ್ರೀಡಾಕೂಟ ನಡೆಯುತ್ತಿರುವದು ಸಂತಸ, ಬಹಳ ಅಚ್ಚುಕಟ್ಟಾಗಿ ಕ್ರೀಡಾಕೂಟ ಆಯೋಜನೆ ಮಾಡಿದ್ದಾರೆ, ಮುಂದಿನ ದಿನಗಳಲ್ಲಿ ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡುವಷ್ಟು ಶಕ್ತಿ ಇಲ್ಲಿನ ಸಂಘಟಕರಿಗೆ ಇದೆ. ಇಲ್ಲಿನ ಪೂಜ್ಯ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ವಸತಿ ಹಾಗೂ ಊಟಕ್ಕೆ ಬಹಳ ಸಹಕಾರ ನೀಡಿದ್ದಾರೆ, ಕೊಪ್ಪಳ ನಮಗೆ ಸದಾ ನೆನಪಲ್ಲಿ ಇರುತ್ತದೆ ಎಂದರು.
ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅವರು ಮಾತನಾಡಿ, ರಾಷ್ಟçದ ೩೩ ರಾಜ್ಯಗಳ ೧೫೦೦ ಜನರು ಕೊಪ್ಪಳಕ್ಕೆ ಬಂದಿರುವದು ವಿಸ್ಮಯ ತಂದಿದೆ, ನಮ್ಮೂರಲ್ಲಿ ಇಂತಹ ಕಾರ್ಯಕ್ರಮ ಸಂಘಟಿಸುವ ಶಕ್ತಿ ಇರುವ ಯುವಕರು ಇರುವದು ಬಹಳ ಆನಂದವಾಗಿದೆ, ಮುಂದಿನ ದಿನಗಳಲ್ಲಿ ಇಂತಹ ಅನೇಕ ಕಾರ್ಯಕ್ರಮಗಳು ಇಲ್ಲಿ ನಡೆಯಲಿ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮಾತನಾಡಿ, ಇಡೀ ದೇಶವೇ ಇಂದು ಕೊಪ್ಪಳದಲ್ಲಿ ನಿಂತ ಹಾಗೆ ಭಾಸವಾಗುತ್ತಿದೆ, ಇಷ್ಟು ಜನರನ್ನು ಕರೆಸಿ ಕ್ರೀಡಾಕೂಟ ನಡೆಸಿರುವದು ಸಾಮಾನ್ಯವಲ್ಲ, ಬಹುಭಾಷೆ ಬಹುಸಂಸ್ಕೃತಿ ಬಹು ಆಯಾಮದ ಭಾರತಕ್ಕೆ ಕೊಪ್ಪಳವನ್ನು ಪರಿಚಯಿಸಿದ ಸಂಘಟಕರು ಅಭಿನಂದನಾರ್ಹರು ಎಂದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ವಿರೇಶ ಮಹಾಂತಯ್ಯನಮಠ ಮಾತನಾಡಿ, ಸ್ನೇಹಿತರೆಲ್ಲ ಸೇರಿ ಜಿಲ್ಲೆಯಲ್ಲಿ ಕ್ರೀಡೆಯನ್ನು ಬೆಳೆಸುತ್ತಿದ್ದಾರೆ, ನಮ್ಮ ಮಕ್ಕಳು ಸಹ ಸಾಧನೆ ಮಾಡಬೇಕು ಕ್ರೀಡೆಯಲ್ಲಿ ಮುಂದೆ ಬರಬೇಕು ಆ ನಿಟ್ಟಿನಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೊಸಿಯೇಷನ್ ಸಂಸದ ರಾಜಶೇಖರ ಹಿಟ್ನಾಳ ಅವರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದರು.
ಕ್ರೀಡಾಕೂಟವನ್ನು ಭಾರತೀಯ ಪೆಂಕಾಕ್ ಸಿಲತ್ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯ ಪೆಂಕಾಕ್ ಸಿಲತ್ ಅಸೊಸಿಯೇಷನ್, ಜಿಲ್ಲಾ ಅಥ್ಲೆಟಿಕ್ ಅಸೊಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಕಾರದಿಂದ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಮಾಜಿ ಸಚಿವರು ಪೆಂಕಾಕ್ ಸಿಲತ್ ರಾಜ್ಯ ಗೌರವ ಅಧ್ಯಕ್ಷ ಅಮರೇಗೌಡ ಬಯ್ಯಾಪೂರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರಡ್ಡಿ ಶ್ರೀನಿವಾಸ, ಸಾಯಿ ಸಂಸ್ಥೆಯ ಕುಸ್ತಿ ತರಬೇತುದಾರರು ಸಿಲತ್ ರಾಷ್ಟಿçÃಯ ಕ್ರೀಡಾಕೂಟದ ವೀಕ್ಷಕ ರಾಮ್ ಎಸ್. ಬುಡಕಿ, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶೀಲ್ದಾರ ವಿಠ್ಠಲ ಚೌಗಲಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮತ್ತು ರಾಜ್ಯ ಸಿಲತ್ ಸಂಸ್ಥೆ ಜಂಟಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ, ಸಿಲತ್ ಸಂಸ್ಥೆ ರಾಷ್ಟಿçÃಯ ಹಿರಿಯ ಉಪಾಧ್ಯಕ್ಷೆ ಫಿಲಿಯಾ ಥಾಮಸ್, ರಾಷ್ಟಿçÃಯ ಪೆಂಕಾಕ್ ಸಿಲತ್ ಫೆಡರೇಷನ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ ಟೈಲರ್, ರಾಷ್ಟಿçÃಯ ಖಜಾಂಚಿ ತಾರಿಖ್ ಅಹ್ಮದ್ ಜರ್ಗಾರ್, ಕರ್ನಾಟಕ ರಾಜ್ಯ ಪಂಕಾಕ್ ಸಿಲತ್ ಸಂಸ್ಥೆಯ ಅಧ್ಯಕ್ಷ ಜಗನ್ನಾಥ ಅಲಂಪಲ್ಲಿ, ಜಿಲ್ಲಾ ಅಧ್ಯಕ್ಷ ಮೌನೇಶ ವಡ್ಡಟ್ಟಿ, ಪ್ರಧಾನ ಕಾರ್ಯದರ್ಶಿ ಈರಣ್ಣ ಬದಾಮಿ, ಹನುಮಸಾಗರ್ ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಾಚಲಾಪೂರ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ, ಮುಖಂಡರಾದ ಪ್ರಲ್ಹಾದರಾವ್ ದೇಸಾಯಿ, ಬಿ. ಎಫ್. ಇಬ್ರಾಹಿಂ, ಮಹಮ್ಮದ್ ಅಬ್ದುಲ್ ಕರಿಮ್ ವಂಟೆಳಿ, ವಿಶ್ವನಾಥ್ ಕನ್ನೂರ, ಪ್ರಹ್ಲಾದ್ ಅಗಳಿ, ಕಾಂಗ್ರೆಸ್ ಮುಖಂಡರಾದ ರವಿ ಕುರಗೋಡ ಯಾದವ, ಗಂಗಾಧರಸ್ವಾಮಿ ಕನಕಗಿರಿ, ಜ್ಯೋತಿ ಎಂ. ಗೊಂಡಬಾಳ, ವಿಶಾಲಾಕ್ಷಿ ತಾವರಗೇರಿ, ಸಲೀಂ ಅಳವಂಡಿ, ಸುಮಂಗಲಾ ನಾಯಕ್, ಮಲ್ಲಿಕಾರ್ಜುನ ಪೂಜಾರ, ಅಥ್ಲೆಟಿಕ್ ಸಂಸ್ಥೆಯ ಶರಣಬಸವ ಬಂಡಿಹಾಳ, ರಿಯಾಜ್ ಮಂಗಲೂರ ಇತರರು ಇದ್ದರು.
ಸಾಹಿತ್ಯ ಎಂ. ಗೊಂಡಬಾಳ ಪ್ರಾರ್ಥಿಸಿದರು, ಜಗನ್ನಾಥ ಅಲಂಪಲ್ಲಿ ಸ್ವಾಗತಿಸಿದರು, ಮಂಜುನಾಥ ಜಿ. ಗೊಂಡಬಾಳ ನಿರ್ವಹಿಸಿದರು, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಹಂಚಿನಾಳ ವಂದಿಸಿದರು.

ಜಾಹೀರಾತು

About Mallikarjun

Check Also

screenshot 2025 10 07 20 38 18 90 a71c66a550bc09ef2792e9ddf4b16f7a.jpg

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

Many of my deepfake videos are circulating everywhere: Nirmala Sitharaman ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.