Breaking News

ಅ.6 ರಂದು ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ: ಕಾನೂನು ಸುವ್ಯವಸ್ಥೆ ಕುರಿತು ಪೂರ್ವಭಾವಿ ಸಭೆ

Chief Minister's visit to Koppal district on October 6th: Preliminary meeting on law and order

Screenshot 2025 09 30 20 54 43 48 E307a3f9df9f380ebaf106e1dc980bb67858132770434110390

ಕಾನೂನು ಸುವ್ಯವಸ್ಥೆ, ಟ್ರಾಫಿಕ್ ನಿರ್ವಹಣೆಯಲ್ಲಿ ಸಮಸ್ಯೆಗಳಾಗದಂತೆ ಮುಂಜಾಗ್ರತೆ ವಹಿಸಿ: ಎಸ್.ಪಿ. ಡಾ. ರಾಮ್ ಎಲ್. ಅರಸಿದ್ದಿ

ಜಾಹೀರಾತು
ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಅಕ್ಟೋಬರ್ 6 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರುವುದರಿಂದ ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ನಿರ್ವಹಣೆಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಪೊಲೀಸ್ ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಹೇಳಿದರು.
ಅವರು ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅ.6 ರಂದು ಮಾನ್ಯ ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸದ ಹಿನ್ನೆಲೆ ಪೊಲೀಸ್ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧಿಕಾರಿಗಳಿಗೆ ನೀಡಿದ ಕೆಲಸವನ್ನು ಮುಂದೆ ನಿಂತು ಜವಾಬ್ದಾರಿಯಿಂದ ಮಾಡಬೇಕು. ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಇತರೆ ಬೇರೆ ಬೇರೆ ಜಿಲ್ಲೆಗಳಿಂದ 2500 ಪೊಲೀಸ್ ಸಿಬ್ಬಂದಿ ಬರುತ್ತಾರೆ. ಅವರಿಗೆ ಉಳಿದುಕೊಳ್ಳಲು ಸಮುದಾಯ ಭವನ ಮತ್ತು ಕಲ್ಯಾಣ ಮಂಟಪಗಳಲ್ಲಿ ವ್ಯವಸ್ಥೆ ಮಾಡಬೇಕು. ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ವಾಹನಗಳ ಪಾಸ್‌ಗಳನ್ನು ಪಡೆಯಲು ಗುರುತಿನ ಚೀಟಿಯೊಂದಿಗೆ ಫೋಟೋಗಳನ್ನು ಕೊಡಬೇಕು ಎಂದರು.
ದೊಡ್ಡ ಕಾರ್ಯಕ್ರಮ ಆಗಿರುವುದರಿಂದ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಕ್ರಮದ ಮುಖ್ಯ ವೇದಿಕೆವರೆಗಿನ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕರು ವಾಹನಗಳನ್ನು ಪಾರ್ಕಿಂಗ್ ಮಾಡಬಾರದು. ಅಧಿಕಾರಿಗಳ ವಾಹನಗಳಿದ್ದರೆ ಪಾಸ್‌ಗಳನ್ನು ಪಡೆಯಬೇಕು. ಜೆಸ್ಕಾಂ, ನಗರಸಭೆ, ಪೊಲೀಸ್ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯಕ್ಕೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ಕ್ಯಾ.ಮಹೇಶ್ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಕಿಮ್ಸ್ ನಿರ್ದೇಶಕ ವಿಜಯನಾಥ ಇಟಗಿ, ಜಿಲ್ಲಾ ವಾರ್ತಾಧಿಕಾರಿ ಡಾ.ಸುರೇಶ ಜಿ., ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷರಾದ ನಾಗರಾಜ ಜುಮ್ಮನ್ನವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About Mallikarjun

Check Also

screenshot 2025 10 07 20 38 18 90 a71c66a550bc09ef2792e9ddf4b16f7a.jpg

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

Many of my deepfake videos are circulating everywhere: Nirmala Sitharaman ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.