ರೇಬಿಸ್ ರೋಗದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ತಾಂತ್ರಿಕ ಕಾರ್ಯಾಗಾರ

One-day district level technical workshop on rabies

ಕೊಪ್ಪಳ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಿ: ಡಾ. ಸುರೇಶ ಬಿ.ಇಟ್ನಾಳ
ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ನೀನು, ನಾನು ಮತ್ತು ನಮ್ಮ ಸಮಾಜ ಎನ್ನುವ ಮಾತಿನಂತೆ ನಮ್ಮ ಕೊಪ್ಪಳ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪ್ರಾಣಿ ದಯಾ ಸಂಘ ಹಾಗೂ ಕೊಪ್ಪಳ ಕೃಷಿ ತಂತ್ರಜ್ಞರ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ರೇಬಿಸ್ ದಿನದ ಅಂಗವಾಗಿ ಒಂದು ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ರೇಬಿಸ್ ರೋಗದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಈ ರೇಬಿಸ್ ರೋಗದ ಕುರಿತು ಹೆಚ್ಚಾಗಿ ಜಾಗೃತಿ ಕಾರ್ಯಕ್ರಮ ಮಾಡಬೇಕು. ಅಂತಹ ಪ್ರದೇಶಗಳಲ್ಲಿ ಹೈನುಗಾರಿಕೆ, ದನ-ಕರುಗಳ ಸಾಕಾಣಿಕೆ ಹೆಚ್ಚಾಗಿ ಇರುವುದರಿಂದ ಅಲ್ಲಿ ರೇಬಿಸ್ ಬಗ್ಗೆ ಮಾಹಿತಿ ನೀಡುವ ಮೂಲಕ ಅವರಿಗೆ ಜಾಗೃತಿ ಮೂಡಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೀದಿನಾಯಿ ಸಂಖ್ಯೆಯನ್ನು ತಡೆಗಟ್ಟಬೇಕು. ಹಾಗೆಯೇ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ಇದಕ್ಕಾಗಿ ಒಂದು ಸಮಿತಿಯನ್ನು ಸಹ ಮಾಡಲಾಗಿದೆ. ಎಲ್ಲರೂ ಸೇರಿ ನಮ್ಮ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಬೇಕು. ಇದರ ಜೊತೆಗೆ ವೆಟರ್ನರಿ ವೈದ್ಯರು ಸಹ ಸಾರ್ವಜನಿಕರಿಗೆ ರೇಬಿಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಗ್ರಾಮೀಣ ಪ್ರದೇಶಗಳಲ್ಲಿ ಬೀದಿನಾಯಿಗಳ ಸಂಖ್ಯೆ ಬಹಳ ಹೆಚ್ಚಾಗಿದೆ. ಎಲ್ಲಾ ಕಡೆಗೂ ಅದೇ ಸಮಸ್ಯೆ, ಎಲ್ಲರೂ ಕೂಡ ಒಟ್ಟಾಗಿ ಬೀದಿನಾಯಿಗಳನ್ನು ಅನಿಮಲ್ ಕಂಟ್ರೋಲ್ ಬೋರ್ಡ್ಗೆ ಸೇರಿಸುವ ಕೆಲಸ ಮಾಡಿ ರೇಬಿಸ್ ಕಡಿಮೆ ಮಾಡಲು ನಾವು ಪ್ರಯತ್ನ ಮಾಡಿದಾಗ ಮಾತ್ರ 2030ಕ್ಕೆ ನಮ್ಮ ರಾಜ್ಯವನ್ನು ರೇಬಿಸ್ ಮುಕ್ತ ರಾಜ್ಯವನ್ನಾಗಿಸಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಈ ಒಂದು ಆರೋಗ್ಯ ಕಾರ್ಯಕ್ರಮ ಅಂದರೆ ಪ್ರಾಣಿಗಳು ಮತ್ತು ಮಾನವರ ಆರೋಗ್ಯ ಎರಡು ಒಂದೇ ಎಂದು ಅರ್ಥ. ಪ್ರಾಣಿಗಳು ಆರೋಗ್ಯವಾಗಿದ್ದರೆ ನಾವು ಸಹ ರೇಬಿಸ್‌ನಂತಹ ರೋಗದಿಂದ ದೂರವಿರಲು ಸಾಧ್ಯ, ಹಸುವಿನ ಹಾಲು ಸೇರಿದಂತೆ ಇತರೆ ಪದಾರ್ಥಗಳನ್ನು ನಾವು ಉಪಯೋಗಿಸುತ್ತೇವೆ. ಹಾಗಾಗಿ ನಮಗೆ ನಮ್ಮ ಆರೋಗ್ಯದ ಕಾಳಜಿಯ ಜತೆಗೆ ಸಾಕು ಪ್ರಾಣಿಗಳ ಆರೋಗ್ಯವು ಸಹ ಬಹಳ ಮುಖ್ಯ. ಅದಕ್ಕಾಗಿ ಆರೋಗ್ಯ ಇಲಾಖೆ ಮತ್ತು ಪಶು ವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಇಂತಹ ಕಾರ್ಯಾಗಾರಗಳು ನಡೆಯಬೇಕು ಎಂದು ಹೇಳಿದರು.
ಕೊಪ್ಪಳ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಿರ್ಮಲಾ ಎಮ್.ಕೆ ಅವರು ಮಾತನಾಡಿ, ರೇಬಿಸ್ ರೋಗದ ಕುರಿತು ತಾಂತ್ರಿಕ ಕಾರ್ಯಗಾರದ ಸದುಪಯೋಗ ಪಡಿಸಿಕೊಂಡು, 2030 ಕ್ಕೆ ರೇಬಿಸ್ ಮುಕ್ತ ರಾಜ್ಯವನ್ನಾಗಿ ಮಾಡುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪಾತ್ರ ಬಹಳ ಮುಖ್ಯ ಎಂದು ಹೇಳಿದರು.
ಈ ಸಂದರ್ಭ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ರೇಬಿಸ್ ದಿನದ ಅಂಗವಾಗಿ ರೇಬಿಸ್ ತಡೆಗಟ್ಟಲು ಮುಂದಾಗೋಣ: ನೀವು, ನಾನು, ನಮ್ಮ ಸಮಾಜ ಎನ್ನುವ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಕಾರ್ಯಾಗಾರದಲ್ಲಿ ಬೆಂಗಳೂರು, ಹೆಬ್ಬಾಳದ ಪಶು ವೈದ್ಯಕೀಯ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಜಿ.ಕವಿತಾ ಹಾಗೂ ಕೊಪ್ಪಳದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಗವಿಸಿದ್ದೇಶ ವಿ.ಆರ್ ಅವರು ರೇಬಿಸ್ ರೋಗದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ತಾಂತ್ರಿಕ ಕಾರ್ಯಾಗಾರದ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಗುಲ್ಬರ್ಗಾದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಂಟಿ ನಿರ್ದೇಶಕ ಡಾ.ರಮೇಶ ದೊಡ್ಡಮನಿ, ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕ ಡಾ. ಪಿ. ಮಲ್ಲಯ್ಯ, ಮುನಿರಾಬಾದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಶ್ರೀಧರ ಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ, ಕೊಪ್ಪಳ ಕೃಷಿ ತಂತ್ರಜ್ಞರ ಸಂಸ್ಥೆಯ ಉಪಾಧ್ಯಕ್ಷ ಹಾಗೂ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆ, ಬೆಂಗಳೂರು ಇದರ ನಿಕಟಪೂರ್ವ ಕಾರ್ಯದರ್ಶಿಗಳಾದ ಡಾ. ವೀರಣ್ಣ ಕಮತರ ಸೇರಿದಂತೆ ಕೊಪ್ಪಳ ಜಿಲ್ಲೆಯ ವೆಟರ್ನರಿ ವೈದ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇಂಡಿಯಾ ಸ್ಕಿಲ್ಸ್ ಸ್ಪರ್ಧೆ-2025: ನೋಂದಣಿ ಅವಧಿ ವಿಸ್ತರಣೆ

———————-

ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ(ಕೆ.ಎಸ್.ಡಿ.ಸಿ) ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ನ್ನು ಪ್ರಾರಂಭಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಈ ಸ್ಪರ್ಧೆಯ ವಿಜೇತರಿಗೆ ಸುಧಾರಿತ ತರಬೇತಿ ನೀಡಲಾಗುತ್ತದೆ. ಅವರು ಮುಂದಿನ ವರ್ಲ್ಡ್ ಸ್ಕಿಲ್ಸ್-2026 ಶಾಂಘೈ, ಚೀನಾದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸುವ ಅವಕಾಶ ಪಡೆಯಲಿದ್ದಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಆಸಕ್ತ ಯುವಕ-ಯುವತಿಯರು ಮತ್ತು ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಪ್ರದರ್ಶಿಸಲು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಆಸಕ್ತರು www.skillindiadigital.gov.in/home ವೆಬ್‌ಪೋರ್ಟಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವುದರ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago