Breaking News

ಕನಕಗಿರಿ, ಕಾರಟಗಿ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ: ಅ.6 ರಂದು ಮುಖ್ಯಮಂತ್ರಿಗಳಿAದ ಶಂಕುಸ್ಥಾಪನೆ

The short URL of the present article is: https://kalyanasiri.in/ki65
Drinking water supply to Kanakagiri and Karatagi towns: Chief Minister to lay foundation stone on October 6


ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ನಗರದ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಕೊಪ್ಪಳ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪಟ್ಟಣ ಪಂಚಾಯತ್ ಕನಕಗಿರಿ ಹಾಗೂ ಪುರಸಭೆ ಕಾರಟಗಿ ಇವರ ಸಂಯುಕ್ತಾಶ್ರಯದಲ್ಲಿ ರೂ.204.57 ಕೋಟಿಗಳ ವೆಚ್ಚದ “ಅಮೃತ್ 2.0” ಯೋಜನೆಯಡಿ ತುಂಗಭದ್ರಾ ಜಲಾಶಯ ಮೂಲದಿಂದ ಕನಕಗಿರಿ ಮತ್ತು ಕಾರಟಗಿ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಕಲ್ಪಿಸುವ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಕ್ಟೋಬರ್ 6 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಹೊಸಪೇಟೆ ರಸ್ತೆಯ ಮಾರುತಿ ಸುಜುಕಿ ಶೋರೂಮ್ ಎದುರಿನ ಅಗಡಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನಾ ನೆರವೇರಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ(ಬೆಂಗಳೂರು ಹೊರತು ಪಡಿಸಿ) ಬಿ.ಎಸ್. ಸುರೇಶ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್,  ಕುಷ್ಟಗಿ ಶಾಸಕರು ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಯಲಬುರ್ಗಾ ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ಹಾಗೂ ಕ.ನ.ನೀ.ಸ ಮತ್ತು ಒಳಚರಂಡಿ ಮಂಡಳಿ ಬೆಂಗಳೂರಿನ  ಅಧ್ಯಕ್ಷರಾದ ಶಿವಲೀಲಾ ವಿನಯ್ ಕುಲಕರ್ಣಿ ಅವರು ಕಾರ್ಯಕ್ರಮದ ಘನುಪಸ್ಥಿತಿ ವಹಿಸುವರು.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬೀಸಾಬ ದೋಟಿಹಾಳ, ಕನಕಗಿರಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಹುಸೇನಬೀ ಶ್ಯಾಮಿದಸಾಬ ಚಳ್ಳಮರದ, ಕಾರಟಗಿ ಪುರಸಭೆ ಅಧ್ಯಕ್ಷರಾದ ರೇಖಾ ರಾಜಶೇಖರ್ ಆನೆಹೊಸೂರ್ ಅವರು  ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಸರಕಾರದ ಕಾರ್ಯದರ್ಶಿ ದೀಪಾ ಚೋಳನ್, ಕ.ನ.ನೀ.ಸ ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್, ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ,  ಕ.ನ.ನೀ.ಸ ಮತ್ತು ಒಳಚರಂಡಿ ಮಂಡಳಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಘ್ಯಾನೇಂದ್ರ ಕುಮಾರ್ ಗಂಗ್ವಾರ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಆಗಮಿಸುವರು.
ಕ.ನ.ನೀ.ಸ ಮತ್ತು ಒಳ ಚರಂಡಿ ಮಂಡಳಿ, ಕಲಬುರಗಿಯ ಮುಖ್ಯ ಅಭಿಯಂತರರಾದ  ಪ್ರವೀಣ್ ಲಿಂಗಯ್ಯ, ರಾಯಚೂರಿನ ಕಾರ್ಯಪಾಲಕ ಅಭಿಯಂತರರಾದ ಗುರುರಾಜು ಹೆಚ್.ಈ, ಕೊಪ್ಪಳದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ  ಎಮ್ ಸುಕುಮುನಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಎಮ್. ಗುಂಡೂರ್, ಕನಕಗಿರಿಯ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಾದ ಲಕ್ಷ್ಮಣ ಕಟ್ಟಿಮನಿ ಹಾಗೂ ಕಾರಟಗಿಯ ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
The short URL of the present article is: https://kalyanasiri.in/ki65

About Mallikarjun

Check Also

img202510021202142.jpg

ಸ್ವಾಭಿಮಾನಿ ಕಲ್ಯಾಣ ಪರ್ವ 12ನೇ ಶತಮಾನದ ಶರಣರ ಸ್ವಾಭಿಮಾನದ ಪ್ರತೀಕ

Swabhimani Kalyana Parva is a symbol of the self-respect of the 12th century Sharanas. ಹನ್ನೆರಡನೇ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.