Koppal District In-charge Minister's tour program

ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಅಕ್ಟೋಬರ್ 4 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅ. 3ರಂದು ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಕಾರಟಗಿಗೆ ಆಗಮಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡಿ ವಾಸ್ತವ್ಯ ಮಾಡುವರು. ಅ. 4 ರಂದು ಬೆಳಿಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ, 11.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಸನ್ಮಾನ್ಯ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊಸಪೇಟೆ ರಸ್ತೆಯ ಅಗಡಿ ಲೇಔಟನಲ್ಲಿ ಕಾರ್ಯಕ್ರಮದ ಸ್ಥಳದ ವೀಕ್ಷಣೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 6 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ, 7.30ಕ್ಕೆ ಕಾರಟಗಿಗೆ ತೆರಳಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡಿ, ಬಳಿಕ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು. ಮುಂದಿನ ಕಾರ್ಯಕ್ರಮಗಳನ್ನು ನಂತರ ತಿಳಿಸಲಾಗುವುದು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.