Koppal district tour by Chief Minister's Economic Advisor Basavaraj Rayareddy from October 5th to 7th

ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಅಕ್ಟೋಬರ್ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅ.5 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 7 ಗಂಟೆಗೆ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು. ಅ.6 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಕೊಪ್ಪಳ ಜಿಲ್ಲಾ ವ್ಯಾಪ್ತಿಯ ನೂತನ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳೊAದಿಗೆ ಭಾಗವಹಿಸುವರು. ಸಂಜೆ 5 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸುವರು. ಅ.7 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ 11 ಗಂಟೆಗೆ ಯಲಬುರ್ಗಾದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6.30 ಗಂಟೆಗೆ ಯಲಬುರ್ಗಾದಿಂದ ನಿರ್ಗಮಿಸಿ ಹೊಸಪೇಟೆಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.