Breaking News

ಅ. 6ರಂದು ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ

The short URL of the present article is: https://kalyanasiri.in/ua1l
On October 6, various development works worth Rs. 2000 crores in Koppal district will be inaugurated, foundation stone laid and benefits will be distributed to the beneficiaries.


ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ ಇವರ ಸಹಯೋಗದಲ್ಲಿ “ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ”ವನ್ನು ಅಕ್ಟೋಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಾರುತಿ ಸುಜೂಕಿ ಶೋ ರೂಂ ಎದುರುಗಡೆಯ ಅಗಡಿ ಲೇಔಟನಲ್ಲಿ ಆಯೋಜಿಸಲಾಗಿದೆ.

ಜಾಹೀರಾತು
Screenshot 2025 10 04 19 15 36 18 E307a3f9df9f380ebaf106e1dc980bb64250258259396539646

ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ ಅವರು ಪಾಲ್ಗೊಳ್ಳುವರು. ರಾಜ್ಯ ಸಭೆ ಸದಸ್ಯರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಗೌರವಾನ್ವಿತ ಉಪಸ್ಥಿತಿ ವಹಿಸುವರು.

ಸಮಾರಂಭದಲ್ಲಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ, ಇಂಧನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್.ಜಮೀರ್ ಅಹ್ಮದ್ ಖಾನ್, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಇಲಾಖೆಯ ಸಚಿವರಾದ ಶರಣಬಸಪ್ಪ ದರ್ಶನಾಪುರ, ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ, ಕೃಷಿ ಇಲಾಖೆಯ ಸಚಿವರಾದ ಎನ್.ಚೆಲುವರಾಯಸ್ವಾಮಿ, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಪೌರಾಡಳಿತ ಹಾಗೂ ಹಜ್ ಇಲಾಖೆಯ ಸಚಿವರಾದ ರಹೀಂ ಖಾನ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವ ವಿಜ್ಞಾನ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾದ ಡಿ.ಸುಧಾಕರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಇಲಾಖೆಯ ಸಚಿವರಾದ ಸುರೇಶ ಬಿ.ಎಸ್., ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಾಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್. ಬೋಸರಾಜು, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ ಧರ್ಮಸಿಂಗ್ ಅವರು ಉಪಸ್ಥಿತರಿರುವರು.

ವಿಶೇಷ ಆಹ್ವಾನಿತರಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ರಾಜಶೇಖರ ಬಸವರಾಜ್ ಹಿಟ್ನಾಳ, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಜನಾರ್ಧನ ರೆಡ್ಡಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ.ಚಂದ್ರಶೇಖರ ಬಿ. ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ್ ಬಯ್ಯಾಪುರ ಹಾಗೂ ಹೇಮಲತಾ ನಾಯಕ ಮತ್ತು ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ ಸಾಬ್ ನಬಿಸಾಬ ದೋಟಿಹಾಳ, ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಮದ್ ಪಟೇಲ್ ಎಸ್.ಎಮ್. ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಶ್ರೀನಿವಾಸ್ ಗುಪ್ತಾ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಹಾಗೂ ಕೊಪ್ಪಳ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ, ಗ್ರಾಮ ಪಂಚಾಯತಿಗಳ ಮತ್ತು ಇತರೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು.

ಗೌರವಾನ್ವಿತ ಆಹ್ವಾನಿತರಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಇಂಧನ ಹಾಗೂ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್, ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್, ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಸಿನ್, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ ಕಠಾರಿಯಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತಾ, ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಅಮ್ಲಾನ್ ಆದಿತ್ಯ ಬಿಸ್ವಾಸ್, ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಸೆಲ್ವ ಕುಮಾರ್ ಎಸ್., ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೇಜರ್ ಮಣಿವಣ್ಣನ್ ಪಿ., ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ಬಾಲ್, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವ ವಿಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ, ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಎನ್.ವಿ. ಪ್ರಸಾದ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ತುಳಸಿ ಮದ್ದಿನೇನಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ (ಪಂಚಾಯತ್ ರಾಜ್) ಸರ್ಕಾರದ ಕಾರ್ಯದರ್ಶಿಗಳಾದ ರಂದೀಪ್ ಡಿ., ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮನೋಜ್ ಜೈನ್, ನಗರಾಭಿವೃದ್ಧಿ ಇಲಾಖೆಯ (ಪೌರಾಡಳಿತ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳು) ಸರ್ಕಾರದ ಕಾರ್ಯದರ್ಶಿಗಳಾದ ಎಂ.ದೀಪಾ ಚೋಳನ್, ವಸತಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು, ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್, ಸಣ್ಣ ನೀರಾವತಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಬಿ.ಕೆ ಪವಿತ್ರ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಝಹಿರಾ ನಸೀಮ್, ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕ ಕಟಿಯಾರ್ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ನಳಿನ್ ಅತುಲ್ ಅವರು ಪಾಲ್ಗೊಳ್ಳುವರು.

ಶಂಕುಸ್ಥಾಪನೆ ಮತ್ತು ಉದ್ಘಾಟನೆಗೊಳ್ಳಲಿರುವ ಜಿಲ್ಲೆಯ ವಿವಿಧ ಕಾಮಗಾರಿಗಳ ವಿವಿರ:* ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2024-25ನೇ ಸಾಲಿನ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ 34 ವಸತಿ ನಿಲಯಗಳ ಹಾಗೂ 2025-26ನೇ ಸಾಲಿನ ಕಲ್ಯಾಣ ಕರ್ನಾಟಕ ಭಾಗದ 41 ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2 ವಸತಿ ನಿಲಯಗಳ ಶಂಕುಸ್ಥಾಪನೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸರ್ಕಾರದಿಂದ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 215ರಲ್ಲಿ ಘೋಷಿಸಿದಂತೆ ಜಿಟಿಟಿಸಿ ಬಹು ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ತಳಕಲ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಸ್ಥಾಪಿಸಲಾಗುವುದು. ಈ ಬಹು ಕೌಶಲ್ಯಾಭಿವೃದ್ಧಿ ಕೇಂದ್ರದಿಂದ (ಎಂ.ಎಸ್.ಡಿ.ಸಿ) ವರ್ಷವಾರು ಅಂದಾಜು 2000 ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗುವುದು.
 ಕಂದಾಯ ಇಲಾಖೆಯ ಕುಕನೂರು, ಯಲಬುರ್ಗಾ, ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕುಗಳ ಪ್ರಜಾಸೌಧ ಶಂಕುಸ್ಥಾಪನೆ. ನಗರಾಭಿವೃದ್ಧಿ ಇಲಾಖೆಯ ಅಮೃತ್ 2.0 ಯೋಜನೆಯಡಿಯಲ್ಲಿ ತುಂಗಭದ್ರಾ ಜಲಾಶಯ ಮೂಲದಿಂದ ಕುಕನೂರು, ಕನಕಗಿರಿ ಕಾರಟಗಿ ಮತ್ತು ಯಲಬುರ್ಗಾ ಪಟ್ಟಣಗಳಿಗೆ ಹಾಗೂ ಮಾರ್ಗ ಮಧ್ಯದ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್, ತಳಬಾಳ, ಭಾನಾಪುರ ಗ್ರಾಮಗಳಿಗೆ ಮತ್ತು ಟಾಯ್ ಕ್ಲಸ್ಟರ್ ಇಂಡಸ್ಟ್ರೀಗಳಿಗೆ ಸಂಯುಕ್ತ ಕುಡಿಯುವ ನೀರು ಸರಬರಾಜು ಕಲ್ಪಿಸುವ ಯೋಜನೆ ಶಂಕುಸ್ಥಾಪನೆ, ಕೊಪ್ಪಳ ನಗರದಲ್ಲಿ ಭಕ್ತ ಕನಕದಾಸ ಪುತ್ಥಳಿ ಅನಾವರಣ ಹಾಗೂ ಭಾಗ್ಯನಗರದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ.
 ಜಲಸಂಪನ್ಮೂಲ ಇಲಾಖೆಯಿಂದ ಗಂಗಾವತಿ ತಾಲೂಕಿನಲ್ಲಿರುವ ಇಂದರಗಿ ಹಾಗೂ ಇತರೆ 27 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ಮುಕ್ಕುಂಪಿ ಹಾಗೂ ಇತರೆ 5 ಕೆರೆಗಳಿಗೆ ಅಚ್ಚುಕಟ್ಟು ಭಾಗದಲ್ಲಿ ನೀರಾವರಿ ವಂಚಿತ 15,605 ಎಕರೆ ಪ್ರದೇಶಕ್ಕೆ ನೀರೊದಗಿಸುವ ಏತ ನೀರಾವರಿ ಯೋಜನೆ ಉದ್ಘಾಟನೆ. ವೈದ್ಯಕೀಯ ಶಿಕ್ಷಣ ಇಲಾಖೆ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕೊಪ್ಪಳ ಅಧೀನದ ನೂತನ 450 ಹಾಸಿಗೆ ಸಾಮರ್ಥ್ಯದ ಬೋಧಕ ಆಸ್ಪತ್ರೆಯ ನಾಲ್ಕನೇ ಅಂತಸ್ತಿನ ಮೇಲೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ನಿರ್ಮಾಣ ಮತ್ತು 450 ಹಾಸಿಗೆಗಳ ಬೋಧಕ ಆಸ್ಪತ್ರೆ ಉದ್ಘಾಟನೆ.
 ತೋಟಗಾರಿಕೆ ಇಲಾಖೆಯ ಕನಕಗಿರಿ ತಾಲೂಕಿನ ಶಿರವಾರ ಗ್ರಾಮದಲ್ಲಿ ಹೈಟೆಕ್ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಶಂಕುಸ್ಥಾಪನೆ. ಸಮಾಜ ಕಲ್ಯಾಣ ಇಲಾಖೆಯಿಂದ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ. ಅರಣ್ಯ ಇಲಾಖೆಯಿಂದ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಕಬ್ಬರಗಿ ಜಲಪಾತ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಹಿರೇಬೆಣಕಲ್ ಮೋರೇರ ಬೆಟ್ಟಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕುಷ್ಟಗಿ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡುಗಳಲ್ಲಿ ರಸ್ತೆ ಅಭಿವೃದ್ಧಿ.
 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೊಪ್ಪಳ, ಕುಷ್ಟಗಿ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ಮತ್ತು ಸಮುದಾಯ ಭವನಗಳ ನಿರ್ಮಾಣ. ಲೋಕೋಪಯೋಗಿ ಇಲಾಖೆಯಿಂದ ಕೊಪ್ಪಳ, ಕುಷ್ಟಗಿ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳ ಅಭಿವೃದ್ಧಿ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಯಿಂದ ಗಂಗಾವತಿ ತಾಲೂಕು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಕೊಠಡಿಗಳ ನಿರ್ಮಾಣ ಮತ್ತು ಕುಷ್ಟಗಿ ತಾಲೂಕಿನ ಬಾಲಕಿಯರ ಸರಕಾರಿ ಫ್ರೌಢ ಶಾಲೆಗೆ ಭೋಜನಾಲಯ ಹಾಗೂ ಅಡುಗೆ ಕೊಠಡಿ ನಿರ್ಮಾಣ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏತ ನೀರಾವರಿ ಯೋಜನೆಗಳ ಅಭಿವೃದ್ಧಿ ಕಾಮಗಾರಿ ಹಾಗೂ ಚೆಕ್ ಡ್ಯಾಂ ನಿರ್ಮಾಣ. ಸಾರಿಗೆ ಇಲಾಖೆಯಿಂದ ಕಾರಟಗಿ ಹೊಸ ಬಸ್ ಡಿಪೋ ಘಟಕ ನಿರ್ಮಾಣ ಕಾಮಗಾರಿ.
 ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಹಳೆಯ ಕಟ್ಟಡ ತೆರವುಗೊಳಿಸಿ ಕಲ್ಲಿನಿಂದ ಹೊಸದಾಗಿ ಕಟ್ಟಡ ನಿರ್ಮಾಣ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಷ್ಟಗಿ ತಾಲೂಕಿನ ಎಂ.ಸಿ.ಹೆಚ್ ಆಸ್ಪತ್ರೆ (100 ಹಾಸಿಗೆ), ಡಿ.ಹೆಚ್.ಓ ಕಛೇರಿ, ಜಿಲ್ಲಾ ಆಯುಷ್ ಕಛೇರಿ ಕಟ್ಟಡ, ಯಲಬುರ್ಗಾ ಹಾಗೂ ಕುಷ್ಟಗಿ ತಾಲ್ಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ವಸತಿ ಗೃಹಗಳ ಕಟ್ಟಡ ಹಾಗೂ ಆರೋಗ್ಯ ಕ್ಷೇಮ ಕೇಂದ್ರಗಳ ನಿರ್ಮಾಣ. ಇಂಧನ ಇಲಾಖೆಯಿಂದ ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕು ಮುಸ್ಟೂರು ಗ್ರಾಮದಲ್ಲಿ 110 ಎಂ.ವಿ.ಎ., 110/11 ಕೆ.ವಿ. ವಿದ್ಯುತ್ ಉಪ ಕೇಂದ್ರ ನಿರ್ಮಾಣ. ಕೃಷಿ ಇಲಾಖೆಯಿಂದ ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪ್‌ನಲ್ಲಿ ರೈತರ ವಸತಿ ನಿಲಯದ ಉದ್ಘಾಟನೆ ಜರುಗಲಿದೆ.

*ವಿವಿಧ ಯೋಜನೆಗಳಡಿ 14,297 ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ:* ಕೊಪ್ಪಳ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳ ವಿವಿಧ ಯೋಜನೆಗಳಾದ ಸ್ವಾವಲಂಬಿ ಸಾರಥಿ ಯೋಜನೆ, ನೇರ ಸಾಲ ಯೋಜನೆ, ಗಂಗಾ ಕಲ್ಯಾಣ, ವೃತ್ತಿಪರ ಕುಶಲ ಕರ್ಮಿಗಳಿಗೆ ಉಚಿತ ಉಪಕರಣಗಳ ಸರಬರಾಜು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ವಿಮೆ, ಕೃಷಿ ಯಾಂತ್ರೀಕರಣ, ಸೂಕ್ಷ್ಮ ನೀರಾವರಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆ ಇನ್ನಿತರ ಯೋಜನೆಗಳಿಗೆ ರೂ.50.37 ಕೋಟಿಗಳ ಮೊತ್ತದ ಸೌಲಭ್ಯವನ್ನು ನೇರವಾಗಿ ಒಟ್ಟು 14,297 ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ ಹಾಗೂ ಅಪರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವರು ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳು, ಸಾರ್ವಜನಿಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

The short URL of the present article is: https://kalyanasiri.in/ua1l

About Mallikarjun

Check Also

screenshot 2025 10 07 20 38 18 90 a71c66a550bc09ef2792e9ddf4b16f7a.jpg

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

Many of my deepfake videos are circulating everywhere: Nirmala Sitharaman ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.