The Chief Minister laid the foundation stone of the new building of Smt. Indira Gandhi Residential School on October 6th.

ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಕರ್ಕಿಹಳ್ಳಿಯ(ಪ.ಪಂ-656) ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಕ್ಟೋಬರ್ 6 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಹೊಸಪೇಟೆ ರಸ್ತೆಯ ಮಾರುತಿ ಸುಜುಕಿ ಶೋರೂಮ್ ಎದುರಿನ ಅಗಡಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಹಿರೇಬಗನಾಳ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಂದಮ್ಮ ಗುರುಪಾದಯ್ಯ ಹಿರೇಮಠ, ಉಪಾಧ್ಯಕ್ಷರಾದ ಸೋಮವ್ವ ಮೈಲಪ್ಪ ಮ್ಯಾಗಳಮನಿ ಹಾಗೂ ಸರ್ವ ಸದಸ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಕೃಷ್ಣಾ ಮೇಲ್ದಂಡೆ ಯೋಜನೆ, ಬಾಗಲಕೋಟೆಯ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ಕೆ.ರಾಕೇಶ ಕುಮಾರ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಪಿ.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ