Distribution of rubber flooring: Applications invited from eligible beneficiaries
ಕೊಪ್ಪಳ ಅಕ್ಟೋಬರ್ 09 (ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಬ್ಬರ್ ನೆಲಹಾಸು (COW MAT) ಗಳನ್ನು ವಿತರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗೆ ಎರಡು ರಬ್ಬರ್ ನೆಲಹಾಸುಗಳನ್ನು ವಿತರಿಸಲಾಗುವುದು. ಈ ಕಾರ್ಯಕ್ರಮದಡಿ ಘಟಕದ ವೆಚ್ಚ (ಎರಡು ರಬ್ಬರ್ ನೆಲಹಾಸುಗಳಿಗೆ) ರೂ. 5,698/- ಇದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.50 ರಷ್ಟು ಅಂದರೆ ರೂ.2,849/- ಗಳ ಸಹಾಯಧನ ಮತ್ತು ಶೇ.50 ರಷ್ಟು ಅಂದರೆ ರೂ.2,849/- ಗಳ ಫಲಾನುಭವಿಗಳ ವಂತಿಕೆಯೊAದಿಗೆ ಯೋಜನೆ ಅನುಷ್ಟಾನಗೊಳಿಸಲಾಗುವುದು.
ಅರ್ಜಿ ಸಲ್ಲಿಸಲು ಅರ್ಜಿದಾರರು ಫ್ರೂಟ್ಸ್ ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಕಡ್ಡಾಯವಾಗಿ ಕನಿಷ್ಟ 2 ಜಾನುವಾರುಗಳು ಹೊಂದಿರತಕ್ಕದ್ದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್‌ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು. ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು. ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33.3, ಅಲ್ಪಸಂಖ್ಯಾತರಿಗೆ ಶೇ.15 ಮತ್ತು ವಿಶೇಷ ಚೇತನರಿಗೆ ಶೇ.5 ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 23 ಕೊನೆಯ ದಿನವಾಗಿದೆ. ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಮುಖ್ಯಪಶುವೈದ್ಯಾಧಿಕಾರಿಗಳು(ಆಡಳಿತ), ಮುಖ್ಯಪಶುವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಕಾರಟಗಿ, ಕುಕನೂರು ಕಛೇರಿಗಳಿಗೆ ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲಾಖೆಯ ಉಪನಿರ್ದೇಶಕ ಡಾ.ಪಿ.ಎಂ.ಮಲ್ಲಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇವು ಕತ್ತರಿಸುವ ಯಂತ್ರಗಳ ವಿತರಣೆ: ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಕೊಪ್ಪಳ ಅಕ್ಟೋಬರ್ 09 (ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಮೇವು ಕತ್ತರಿಸುವ ಯಂತ್ರ (2 H.P Electric Motor Chaff Cutter) ಗಳನ್ನು ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ವಿತರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ ಒಂದು ಮೇವು ಕತ್ತರಿಸುವ ಯಂತ್ರವನ್ನು ವಿತರಿಸಲಾಗುವುದು. ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ.34,000/- ಇದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ಫಲಾನುಭವಿಗಳಿಗೆ ಶೇ.50 ಅಂದರೆ ರೂ.17,000/- ಗಳ ಸಹಾಯಧನ ಮತ್ತು ಶೇ.50 ಅಂದರೆ ರೂ.17,000/- ಗಳ ಫಲಾನುಭವಿಗಳ ವಂತಿಕೆಯೊAದಿಗೆ ಯೋಜನೆ ಅನುಷ್ಟಾನಗೊಳಿಸಲಾಗುವುದು.
ಅರ್ಜಿ ಸಲ್ಲಿಸಲು ಅರ್ಜಿದಾರರು ಫ್ರೂಟ್ಸ್ ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಕಡ್ಡಾಯವಾಗಿ ಕನಿಷ್ಟ 2 ಜಾನುವಾರುಗಳನ್ನು ಹೊಂದಿರತಕ್ಕದ್ದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್‌ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು. ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು. ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33.3, ಅಲ್ಪಸಂಖ್ಯಾತರಿಗೆ ಶೇ.15 ಮತ್ತು ವಿಶೇಷ ಚೇತನರಿಗೆ ಶೇ.5 ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 23 ಕೊನೆಯ ದಿನವಾಗಿದೆ. ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಮುಖ್ಯಪಶುವೈದ್ಯಾಧಿಕಾರಿಗಳು(ಆಡಳಿತ), ಮುಖ್ಯಪಶುವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಕಾರಟಗಿ, ಕುಕನೂರು ಕಛೇರಿಗಳಿಗೆ ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲಾಖೆಯ ಉಪನಿರ್ದೇಶಕ ಡಾ.ಪಿ.ಎಂ.ಮಲ್ಲಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.