ಅ.17 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

District level youth festival program on October 17th

ಕೊಪ್ಪಳ ಅಕ್ಟೋಬರ್ 11 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷ ವಯೋಮಾನದೊಳಗಿನ ಯುವಜನರು ಭಾಗವಹಿಸಲು ಅವಕಾಶವಿರುತ್ತದೆ.
ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯವು ರಾಷ್ಟç ಮಟ್ಟದ ಯುವಜನೋತ್ಸವವನ್ನು ಪ್ರತಿ ವರ್ಷ ಜನವರಿ 12 ರಿಂದ 16ರ ವರೆಗೆ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ವಿಜೇತ ಸ್ಪರ್ಧಾಳುಗಳ ತಂಡವನ್ನು ಕಳುಹಿಸುವ ಸಲುವಾಗಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಸಂಘಟಿಸಬೇಕಾಗಿದ್ದು, ಅದರಂತೆ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ರಾಜ್ಯ ಮಟ್ಟದಲ್ಲಿ ಭಾಗವಹಿಸಿ ವಿಜೇತರಾದವರು ರಾಷ್ಟç ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಾರೆ.
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಸಾಂಸ್ಕೃತಿಕ ವಿಭಾಗದಲ್ಲಿ  ಜನಪದ ನೃತ್ಯ (ತಂಡ), ಜನಪದ ಗೀತೆ (ತಂಡ) ಪ್ರಾದೇಶಿಕ ಭಾಷೆ, ಕಥೆ ಬರೆಯುವುದು  (Story Writing)     (1000 ಪದಗಳಿಗೆ ಮೀರದಂತೆ, ಹಿಂದಿ, ಆಂಗ್ಲ, ಪ್ರಾದೇಶಿಕ ಭಾಷೆಯಲ್ಲಿ), ಚಿತ್ರಕಲೆ, ಘೋಷಣೆ(ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಇರಬೇಕು. ಸ್ಪರ್ಧಿಗಳು ಸಿದ್ದಪಡಿಸಿಕೊಂಡಿರುವ ಆಯ್ದ ವಿಷಯಗಳ ಬಗ್ಗೆ 7 ನಿಮಿಷಗಳ ಭಾಷಣ ಮಾಡಬೇಕು), ಕವಿತೆ ಬರೆಯುವುದು (ವೈಯಕ್ತಿಕ: ಹಿಂದಿ, ಆಂಗ್ಲ, ಪ್ರಾದೇಶಿಕ ಭಾಷೆಯಲ್ಲಿ) ಹಾಗೂ  Innovation Track     ವಿಭಾಗದಲ್ಲಿ  Exhibition of Science Mela  ರಾಜ್ಯ ಮಟ್ಟದವರೆಗೆ ಮಾತ್ರ ಆಯೋಜಿಸಲಾಗುವುದು
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಸ್ಪರ್ಧಾಳುಗಳು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ, ಬ್ಯಾಂಕ್ ಪಾಸಬುಕ್ ಪ್ರತಿ, 2-ಭಾವಚಿತ್ರದೊಂದಿಗೆ ಕಾರ್ಯಕ್ರಮ ದಿನದಂದು ಬೆಳಿಗ್ಗೆ 9 ಗಂಟೆಯೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ದೂರವಾಣಿ ಮುಖಾಂತರ ನೋಂದಣಿಗಾಗಿ ಬಿ.ಕೀರ್ತಿವರ್ಧನ ದ್ವಿ.ದ.ಸ-7676343554, ತುಕಾರಾಮ, ಕಛೇರಿ ಸಿಬ್ಬಂದಿ-8197398600 ಇವರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಕಛೇರಿಯ ದೂರವಾಣಿ ಸಂಖ್ಯೆ: 08539-230121 ಗೆ ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago