Awareness program on Z.ED-Lean project and exports on October 16
ಕೊಪ್ಪಳ ಅಕ್ಟೋಬರ್ 14 (ಕರ್ನಾಟಕ ವಾರ್ತೆ): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಉದ್ದೇಶದಿಂದ ರ‍್ಯಾಂಪ್ ಯೋಜನೆಯಡಿಯಲ್ಲಿ ಝಡ್.ಇಡಿ-ಲೀನ್ ಯೋಜನೆ ಹಾಗೂ ರಫ್ತು ಕುರಿತು ಅರಿವು ಕಾರ್ಯಕ್ರಮವನ್ನು ಅಕ್ಟೋಬರ್ 16ರ ಗುರುವಾರ ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ಬಸವೇಶ್ವರ ವೃತ್ತದ ಹತ್ತಿರದ ಫಾರ್ಚೂನ್ ಹೋಟೇಲ್‌ನಲ್ಲಿ ಅಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಅವರು ಕಾರ್ಯಕ್ರಮ ಉದ್ಘಾಟಿಸುವರು. ಗೌರವಾನ್ವಿತ ಅತಿಥಿಗಳಾಗಿ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮನ್ಸೂರ್ ಹಾಗೂ ವಿಟಿಪಿಸಿ ಧಾರವಾಡ ಶಾಖಾ ಕಚೇರಿಯ ಉಪನಿರ್ದೇಶಕ ಟಿ.ಎಸ್. ಮಲ್ಲಿಕಾರ್ಜುನ ಅವರು ಭಾಗವಹಿಸಲಿದ್ದಾರೆ. ಕಾಸಿಯಾ ಅಧ್ಯಕ್ಷರಾದ ಗಣೇಶ್ ರಾವ್ ಬಿ.ಆರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಕಾಸಿಯಾ ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿರುವರು ಎಂದು ಕೊಪ್ಪಳ ಜಿಲ್ಲಾ ಕೈಗಾರಿಕ ಕೇಂದ್ರದ ಪ್ರಕಟಣೆ ತಿಳಿಸಿದೆ.