ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

Athletes from the district sports hostel selected for state-level competition

ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಬೀದರ್‌ನಲ್ಲಿ ಜರುಗಿದ ಕಲಬುರಗಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಬೀದರ್‌ನಲ್ಲಿ ಜರುಗಿದ ಕಲಬುರಗಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅನಿತಾ, ಶಾರದಾ, ಸ್ಪೂರ್ತಿ, ಸಿಂಧು, ಅರ್ಚನಾ, ಮಾನಸ ಮತ್ತು ಭೂಮಿಕಾ ಅವರನ್ನೊಳಗೊಂಡ ತಂಡ, 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದೀಕ್ಷಿತಾ, ಕಾವೇರಿ, ಲತಾ, ಸ್ಪೂರ್ತಿ, ಪ್ರಿಯಾಂಕ, ಪಾರ್ವತಿ ಹಾಗೂ ಯಲ್ಲಮ್ಮ ಅವರನ್ನೊಳಗೊಂಡ ತಂಡ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಿಖಿಲ್, ರಿಷಿನಾಯಕ್, ಅಭಿಲಾಶ್, ಎಂ.ಡಿ.ಇಮ್‌ದಾದ್ ಶೇಖ್, ಶ್ರೀಶೈಲ್, ಚೇತನ್ ಹಾಗೂ ಪೂಜಿತ್ ಸಿಧು ಅವರನ್ನೊಳಗೊಂಡ ತಂಡಗಳು ಪ್ರಥಮ ಸ್ಥಾನ ಗಳಿಸಿ, ಅ.16 ರಂದು ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಕ್ರೀಡಾಪಟುಗಳಿಗೆ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ್, ವಾಲಿಬಾಲ್ ತರಬೇತುದಾರ ಸುರೇಶ, ಖೇಲೋ ಇಂಡಿಯಾ ವಾಲಿಬಾಲ್ ತರಬೇತುದಾರರಾದ ದೀಪಾ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago