Organizer Jyoti Gondbal is the District Women's Congress President.

ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಹಿಳಾ ಸಂಘಟಕಿ, ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಮಂಜುನಾಥ ಗೊಂಡಬಾಳ ಅವರನ್ನು ನೇಮಕ ಮಾಡಿ ಎಐಸಿಸಿ ಮಹಿಳಾ ಘಟಕ ಆದೇಶ ಮಾಡಿದೆ.
ಇದೇ ಮೊದಲ ಬಾರಿಗೆ ಕೇಂದ್ರ ಕಾಂಗ್ರೆಸ್ ಪಕ್ಷದ ಹುದ್ದೆಯ ಆಯ್ಕೆಯನ್ನು ಅತ್ಯಂತ ಗಂಭಿರವಾಗಿ ತೆಗೆದುಕೊಂಡು ಸಂಘಟಕರನ್ನು ಹುಡುಕಿ ನೇಮಕ ಮಾಡುತ್ತಿದೆ. ರಾಜ್ಯ ಸರಕಾರದ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ, ಮಾತೃಭೂಮಿ ರಾಷ್ಟ್ರೀಯ ಯುವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿ ಪಡೆದಿರುವ ಇಲ್ಲಿನ ಪ್ರತಿಭಾವಂತ ಕಾಂಗ್ರೆಸ್ ನಾಯಕಿಗೆ ಹುದ್ದೆ ಒಲಿದಿದ್ದು, ಜಿಲ್ಲೆಯ ಸಚಿವ ಶಿವರಾಜ ತಂಗಡಗಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೇರಿದಂತೆ ಅನೇಕರ ಸಲಹೆ ಪಡೆದು ಮಾಜಿ ಸಚಿವರೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಬಯ್ಯಾಪೂರ ಅವರು ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಸೌಮ್ಯರಡ್ಡಿ ಅವರಿಗೆ ನೇಮಕ ಮಾಡುವಂತೆ ಪತ್ರ ಬರೆದಿದ್ದು, ಇದೀಗ ರಾಷ್ಟ್ರೀಯ ಅಧ್ಯಕ್ಷರು ನೇಮಕ ಮಾಡಿ ಆದೇಶಿಸಿದ್ದಾರೆ.
ಅನೇಕರು ಜಾಲತಾಣ ಮೂಲಕ ಹಾಗೂ ನೇರವಾಗಿ ಶುಭ ಹಾರೈಸಿದ್ದು, ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ಸಾಮರ್ಥ್ಯವಿದ್ದು ಮುಂದಿನ ಎಲ್ಲಾ ಚುನಾವಣೆಗಳಿಗೆ ಪಕ್ಷದ ಮಹಿಳಾ ಕಾರ್ಯಕರ್ತರು ಮತ್ತು ಮಹಿಳಾ ಮತದಾರರನ್ನು ಗಟ್ಟಿಗೊಳಿಸುವ ಕಾರ್ಯ ಮಾಡಿ ಎಂದಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಮಾಲತಿ ನಾಯಕ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿ ವಿಶಿಷ್ಟವಾಗಿ ಕೆಲಸ ಮಾಡಿದ್ದು, ಪಕ್ಷ ಹೇಳಿದ ಪ್ರತಿಯೊಂದನ್ನು ಗಂಭೀರವಾಗಿ ತೆಗೆದುಕೊಂಡು ಸಂಘಟನೆ ಮಾಡಿದ್ದು, ಸಾಮಾಜಿಕ ಜಾಲತಾಣಗಳ ಮೂಲಕವೂ ಸಮರ್ಥವಾಗಿ ಪಕ್ಷವನ್ನು ಸಮರ್ಥಿಸಿಕೊಂಡಿದ್ದಾರೆ. ಅಂದಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್‌ಗೆ ಫಿನಾಯಿಲ್ ಕಳಿಸುವ ಮೂಲಕ ಬಹುಚರ್ಚೆಗೆ ಜ್ಯೋತಿ ಗೊಂಡಬಾಳ ಬೆಳಕಿಗೆ ಬಂದಿದ್ದರು.