ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President.

ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಹಿಳಾ ಸಂಘಟಕಿ, ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಮಂಜುನಾಥ ಗೊಂಡಬಾಳ ಅವರನ್ನು ನೇಮಕ ಮಾಡಿ ಎಐಸಿಸಿ ಮಹಿಳಾ ಘಟಕ ಆದೇಶ ಮಾಡಿದೆ.
ಇದೇ ಮೊದಲ ಬಾರಿಗೆ ಕೇಂದ್ರ ಕಾಂಗ್ರೆಸ್ ಪಕ್ಷದ ಹುದ್ದೆಯ ಆಯ್ಕೆಯನ್ನು ಅತ್ಯಂತ ಗಂಭಿರವಾಗಿ ತೆಗೆದುಕೊಂಡು ಸಂಘಟಕರನ್ನು ಹುಡುಕಿ ನೇಮಕ ಮಾಡುತ್ತಿದೆ. ರಾಜ್ಯ ಸರಕಾರದ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ, ಮಾತೃಭೂಮಿ ರಾಷ್ಟ್ರೀಯ ಯುವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿ ಪಡೆದಿರುವ ಇಲ್ಲಿನ ಪ್ರತಿಭಾವಂತ ಕಾಂಗ್ರೆಸ್ ನಾಯಕಿಗೆ ಹುದ್ದೆ ಒಲಿದಿದ್ದು, ಜಿಲ್ಲೆಯ ಸಚಿವ ಶಿವರಾಜ ತಂಗಡಗಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೇರಿದಂತೆ ಅನೇಕರ ಸಲಹೆ ಪಡೆದು ಮಾಜಿ ಸಚಿವರೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಬಯ್ಯಾಪೂರ ಅವರು ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಸೌಮ್ಯರಡ್ಡಿ ಅವರಿಗೆ ನೇಮಕ ಮಾಡುವಂತೆ ಪತ್ರ ಬರೆದಿದ್ದು, ಇದೀಗ ರಾಷ್ಟ್ರೀಯ ಅಧ್ಯಕ್ಷರು ನೇಮಕ ಮಾಡಿ ಆದೇಶಿಸಿದ್ದಾರೆ.
ಅನೇಕರು ಜಾಲತಾಣ ಮೂಲಕ ಹಾಗೂ ನೇರವಾಗಿ ಶುಭ ಹಾರೈಸಿದ್ದು, ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ಸಾಮರ್ಥ್ಯವಿದ್ದು ಮುಂದಿನ ಎಲ್ಲಾ ಚುನಾವಣೆಗಳಿಗೆ ಪಕ್ಷದ ಮಹಿಳಾ ಕಾರ್ಯಕರ್ತರು ಮತ್ತು ಮಹಿಳಾ ಮತದಾರರನ್ನು ಗಟ್ಟಿಗೊಳಿಸುವ ಕಾರ್ಯ ಮಾಡಿ ಎಂದಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಮಾಲತಿ ನಾಯಕ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿ ವಿಶಿಷ್ಟವಾಗಿ ಕೆಲಸ ಮಾಡಿದ್ದು, ಪಕ್ಷ ಹೇಳಿದ ಪ್ರತಿಯೊಂದನ್ನು ಗಂಭೀರವಾಗಿ ತೆಗೆದುಕೊಂಡು ಸಂಘಟನೆ ಮಾಡಿದ್ದು, ಸಾಮಾಜಿಕ ಜಾಲತಾಣಗಳ ಮೂಲಕವೂ ಸಮರ್ಥವಾಗಿ ಪಕ್ಷವನ್ನು ಸಮರ್ಥಿಸಿಕೊಂಡಿದ್ದಾರೆ. ಅಂದಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್‌ಗೆ ಫಿನಾಯಿಲ್ ಕಳಿಸುವ ಮೂಲಕ ಬಹುಚರ್ಚೆಗೆ ಜ್ಯೋತಿ ಗೊಂಡಬಾಳ ಬೆಳಕಿಗೆ ಬಂದಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago