ಉಪ ಲೋಕಾಯುಕ್ತರಿಂದ ಅ.30, 31 ರಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ

Public inquiry reception program by the Deputy Lokayukta on October 30th and 31st

ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಅಕ್ಟೋಬರ್ 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲಾ ಶಿಬಿರವನ್ನು ಹಮ್ಮಿಕೊಂಡಿದ್ದು, ಶಿಬಿರದ ಅವಧಿಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಅ.30 ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಅ.31 ರಂದು ಲೋಕಾಯುಕ್ತ ವ್ಯಾಪ್ತಿಯಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ನಡೆಸಲಿದ್ದಾರೆ.
ಉಪಲೋಕಾಯುಕ್ತರು ಅ.30 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಅಹವಾಲು ಸ್ವೀಕರಿಸುವರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ, ನೌಕರರಿಂದ ಸಾರ್ವಜನಿಕರಿಗೆ ಕಾನೂನು ರೀತ್ಯ ಆಗಬೇಕಾದ ಕೆಲಸದಲ್ಲಿ ವಿಳಂಬ, ವೃಥಾ ತೊಂದರೆ ಅಥವಾ ಇನ್ನಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ ಈ ಕುರಿತು ಉಪಲೋಕಾಯುಕ್ತರಿಗೆ ಲಿಖಿತ ದೂರು ಸಲ್ಲಿಸಬಹುದು.
ಅ.31 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.45 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ಕೊಪ್ಪಳ ಜಿಲ್ಲೆಗೆ ಸಂಬAಧಪಟ್ಟAತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸುವರು. ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ ತನಿಖೆ ಅಥವಾ ವಿಚಾರಣೆ ಬಾಕಿ ಇರುವ ಪ್ರಕರಣಗಳ (ಈ ಕಚೇರಿಯಿಂದ ನೋಟಿಸ್ ಕಳುಹಿಸಿರುವ) ದೂರುದಾರರು ಹಾಗೂ ಎದುರುದಾರರು ನಿಗದಿತ ಸಮಯಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago