Quiz competition as part of the Tobacco Free Youth Campaign
ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ತಂಬಾಕು ನಿಯಂತ್ರಣ ಕೋಶ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಗುನ್ನಾಳ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ಗುನ್ನಾಳ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಅ.14 ರಂದು ಕಾಲೇಜು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗುನ್ನಾಳ ಆಡಳಿತ ವೈದ್ಯಾಧಿಕಾರಿ ಡಾ. ದಯಾನಂದ ಸ್ವಾಮಿ ಅವರು ಯುವ ಜನತೆಗೆ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಸ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಯುವಜನತೆಯ ರಕ್ಷಿಸಲು ಸರ್ಕಾರ ವಿವಿಧ ಮಾಧ್ಯಮಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ತಂಬಾಕಿನಲ್ಲಿ 7000 ವಿಷಾನಿಲಗಳು ಇರುತ್ತವೆ. ತಂಬಾಕು ಸೇವನೆಯಿಂದ ಮುಖ್ಯವಾಗಿ ಕ್ಯಾನ್ಸರ್‌ನಂತ ಮಾರಕ ರೋಗ ಉಂಟಾಗಿ, ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇರುತ್ತದೆ. ತಂಬಾಕು ಸೇವನೆಯಿಂದ ಯುವ ಸಮೂಹ ಕುಟುಂಬ ಮತ್ತು ದೇಶಕ್ಕೆ ಹೊರೆಯಾಗುತ್ತದೆ. ಆದ್ದರಿಂದ 2003ರಲ್ಲಿ ಜಾರಿಗೆ ತಂದ ಕೋಟ್ಪಾ ಕಾಯ್ದೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡು ಜಾಗೃತರಾಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರಿಗೆ ಜೈಲು ಮತ್ತು ದಂಡ ಶಿಕ್ಷೆ ವಿಧಿಸಲಾಗುತ್ತದೆ. ಆದ್ದರಿಂದ ಇಂದಿನ ಯುವ ಸಮೂಹ ತಂಬಾಕು ಸೇವನೆಯಿಂದ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳದೆ ಆರೋಗ್ಯವಂತ ಮನುಷ್ಯರಾಗಿ ಬಾಳಬೇಕೆಂದು ಕರೆ ನೀಡಿದರು. ಜೀವನ ಆಯ್ದುಕೊಳ್ಳಿ ತಂಬಾಕನ್ನಲ್ಲ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಅವರು ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ರಾಷ್ಟಿçÃಯ ಕಾರ್ಯಕ್ರಮಗಳು, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಅಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವ ಕುರಿತು, ನಿರಂತರವಾಗಿ ವಿವಿಧ ಮಾಧ್ಯಮದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ನಂತರ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳಾದ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ, ಆರ್.ಸಿ.ಹೆಚ್. ಕಾರ್ಯಕ್ರಮ, ರಾಷ್ಟಿçÃಯ ಶ್ರವಣದೋಷ ನಿವಾರಣಾ ಮತ್ತು ನಿಯಂತ್ರಣ ಕಾರ್ಯಕ್ರಮ, ಹದಿಹರೆಯದವರ ಆರೋಗ್ಯದ ಮಹತ್ವ, ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ, ಕುಟುಂಬ ಕಲ್ಯಾಣ ಕಾರ್ಯಕ್ರಮ, ಮಾನಸಿಕ ಆರೋಗ್ಯ ಕಾರ್ಯಕ್ರಮ, ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಐ.ಡಿ.ಎಸ್.ಪಿ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಇತರೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ವಿವರವಾಗಿ ಮಾತನಾಡಿದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ 8 ತಂಡಗಳು ಭಾಗವಹಿಸಿದ್ದವು. ಅದರಲ್ಲಿ ಮಂಜುನಾಥ ವಿರುಪಾಕ್ಷಿ ಪ್ರಥಮ(ರೂ.500), ರಾಜಬಕ್ಷಿ ಸಂಗಮೇಶ ದ್ವಿತೀಯ(ರೂ.300) ಹಾಗೂ ನಿವೇದಿತಾ ಹಾಗೂ ಸೃಷ್ಠಿ ತೃತೀಯ(ರೂ200) ಬಹುಮಾನಗಳನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಎನ್.ಟಿ.ಸಿ.ಪಿ ಕಾರ್ಯಕ್ರಮದ ಸಮಾಜ ಕಾರ್ಯಕರ್ತೆ ಸರಸ್ವತಿ, ಕಾಲೇಜಿನ ಪ್ರಾಂಶುಪಾಲರಾದ ವಿಜಯಕುಮಾರ, ಎನ್.ಟಿ.ಸಿ.ಪಿ ಕಾರ್ಯಕ್ರಮದ ಸಲಹೆಗಾರ ಸಂಗಮೇಶ, ಎಸ್.ಟಿ.ಎಸ್ ಕೃಷ್ಣಾಜೀ, ಆರ್.ಕೆ.ಎಸ್.ಕೆ ಆಪ್ತಸಮಾಲೋಚಕ ಮಹೇಶ, ಐ.ಸಿ.ಟಿ.ಸಿ ಆಪ್ತಸಮಾಲೋಚಕ ಬಾಳಪ್ಪ, ಕಾಲೇಜಿನ ಸಹಉಪನ್ಯಾಸಕ ವರ್ಗದವರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಯ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕಾವೇರಿ, ಸಮುದಾಯ ಆರೋಗ್ಯಾಧಿಕಾರಿ ಮಂಜುಳಾ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.