Breaking News

ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ

The short URL of the present article is: https://kalyanasiri.in/1sf9
Special lightning voter registration campaign

ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ಸಿದ್ದಪಡಿಸುವ ವೇಳಾಪಟ್ಟಿಯನ್ವಯ ಅಕ್ಟೋಬರ್ 1 ರಿಂದ ನವೆಂಬರ್ 6 ರವರೆಗೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಅರ್ಹ ಮತದಾರರ ನೋಂದಣಿಗಾಗಿ ಅವಕಾಶ ಕಲ್ಪಿಸಲಾಗಿದೆ.
ಅದರನ್ವಯ ದಿನಾಂಕ:14-10-2025 ರವರೆಗೆ ನಿರೀಕ್ಷಿತ ಮಟ್ಟದಲ್ಲಿ ನೋಂದಣಿಗಾಗಿ ನಮೂನೆ-19 ರ ಅರ್ಜಿಗಳು ಸ್ವೀಕೃತಿಯಾಗದ ಕಾರಣ ನೋಂದಣಿ ಪ್ರಕ್ರಿಯೆಯ ಕಾರ್ಯವೇಗವನ್ನು ತೀವ್ರಗತಿಯಲ್ಲಿ ಚುರುಕುಗೊಳಿಸುವುದು ಅತ್ಯವಶ್ಯವಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ, ಅವರ ಹೆಸರನ್ನು ನೋಂದಾಯಿಸಿ, ಯಾವೊಬ್ಬ ಅರ್ಹ ಮತದಾರರು ನೋಂದಣಿ ಪ್ರಕ್ರಿಯೆಯಿಂದ ಹೊರಗಿರದೇ ಅಂಥವರನ್ನು ನೋಂದಾಯಿಸಿ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಕ್ರಿಯಾತ್ಮಕ ಕಾರ್ಯನಿರ್ವಹಿಸುವುದು ಅತ್ಯಾವಶ್ಯಕವಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 27, 30 ಹಾಗೂ ನವೆಂಬರ್ 3 ರಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೊಳಪಡುವ ಸಂಪೂರ್ಣ ಕ್ಷೇತ್ರದಲ್ಲಿ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ವಿಶೇಷ ಮಿಂಚಿನ ನೋಂದಣಿ ಅಭಿಯಾನ ದಿನಾಂಕಗಳAದು ಆಯುಕ್ತರು, ಮಹಾನಗರ ಪಾಲಿಕೆ, ತಹಶೀಲ್ದಾರರು ಹಾಗೂ ಸಹಾಯಕ ಮತದಾನ ನೋಂದಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಗೊಳಪಡುವ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳ ಸೇವೆಯನ್ನು ಪಡೆದು ಅವರೊಂದಿಗೆ ಉಪ ತಹಶೀಲ್ದಾರರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಹಾಗೂ ಇತರ ಅಧಿಕಾರಿಗಳ ತಂಡವನ್ನು ರಚಿಸಿ(ಅವಶ್ಯಕತೆಗನುಗುಣವಾಗಿ) ಅರ್ಹ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಅಲ್ಲಿ ನೋಂದಣಿಗಾಗಿ ಅರ್ಹರಿರುವ ಮತದಾರರನ್ನು ಕಚೇರಿ ಮುಖ್ಯಸ್ಥರ ಮುಖಾಂತರ ಸಂಪರ್ಕಿಸಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಬೀಡುಬಿಟ್ಟು ನಿಯಮಾನುಸಾರ ನಮೂನೆ-19 ರ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಸ್ವೀಕರಿಸಬೇಕು.
ಜಿಲ್ಲಾಧಿಕಾರಿಗಳು ಆದೇಶವೊಂದನ್ನು ಹೊರಡಿಸಿ ಪ್ರತಿ ತಾಲ್ಲೂಕಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ವಿಶೇಷ ಮಿಂಚಿನ ನೋಂದಣಿ ಅಭಿಯಾನದ ಮೇಲುಸ್ತುವಾರಿಯ ನೋಡಲ್ ಅಧಿಕಾರಿಯೆಂದು ನೇಮಿಸಿ, ತಾವು ಸಂಪೂರ್ಣ ಜಿಲ್ಲಾ ವ್ಯಾಪ್ತಿಗೆ ಹಾಗೂ ಸಹಾಯಕ ಆಯುಕ್ತರು ತಮ್ಮ ತಮ್ಮ ಉಪ ವಿಭಾಗ ವ್ಯಾಪ್ತಿಗೆ ಈ ಅಭಿಯಾನದ ಮೇಲುಸ್ತುವಾರಿ ವಹಿಸಬೇಕು. ಮಿಂಚಿನ ನೋಂದಣಿ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಳಿಸಲು ಎಲ್ಲರೂ ಶ್ರಮವಹಿಸಿ ಕ್ರಿಯಾತ್ಮಕವಾಗಿ, ಆಶಾದಾಯಕ ನಿರಾಳ ಸದುದ್ದೇಶದೊಂದಿಗೆ ಕಾರ್ಯನಿರ್ವಹಿಸಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಮತ್ತು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
The short URL of the present article is: https://kalyanasiri.in/1sf9

About Mallikarjun

Check Also

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ನೋಂದಣಿ ಪ್ರಕ್ರಿಯೆ ಪ್ರಾರಂಭ

Karnataka North East Teachers Constituency: Voter Registration Process ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣೆ ತಂಡ, ಮತದಾರರ ಮಾಹಿತಿ ಮತ್ತು …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.