Breaking News

ದೇಶಕ್ಕೆ ಪೊಲೀಸ್ ಕೊಡುಗೆ ಅಪಾರ- ಸಿಇಒ ವರ್ಣಿತ್ ನೇಗಿ

Police contribution to the country is immense - CEO Varnith Negi


Screenshot 2025 10 21 17 50 55 28 E307a3f9df9f380ebaf106e1dc980bb66589332926795918295 1024x667

ಕೊಪ್ಪಳ ಅಕ್ಟೋಬರ್ 21 (ಕರ್ನಾಟಕ ವಾರ್ತೆ): ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಮತ್ತು ಜನರಿಗೆ ಅಗತ್ಯ ರಕ್ಷಣೆ ನೀಡುವಲ್ಲಿ ಪೊಲೀಸ್ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು. 

ಜಾಹೀರಾತು

 ಅವರು ಮಂಗಳವಾರ ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

 ಸೈನಿಕರು ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ದೇಶವನ್ನು ರಕ್ಷಣೆ ಮಾಡಿದರೆ, ಪೊಲೀಸರು ಜನರ ಮಧ್ಯದಲ್ಲಿದ್ದುಕೊಂಡೇ ಎಲ್ಲರಿಗೂ ರಕ್ಷಣೆ ನೀಡುತ್ತಾರೆ. ಪ್ರವಾಹ, ವಿಪತ್ತು ಸೇರಿದಂತೆ ಹಲವಾರು ಆಪತ್ತು ಸಂದರ್ಭಗಳಲ್ಲಿ ಜನರನ್ನು ರಕ್ಷಿಸಲು ತಮ್ಮ ಜೀವನದ ಹಂಗನ್ನು ತೊರೆದು ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಬಹಳ ಮಹತ್ವದ್ದಾಗಿದೆ. ಪೊಲೀಸ್ ಕರ್ತವ್ಯ ನಿಷ್ಠೆಗೆ ಅವರ ಕುಟುಂಬ ಸದಸ್ಯರ ಸಹಕಾರ ಕೂಡ ಸಾಕಷ್ಟಿದೆ. ಹುತಾತ್ಮ ಪೊಲೀಸರ ಸ್ಮರಣೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಬಾರದು. ನಮ್ಮ ದೇಶದಲ್ಲಿ ಇತ್ತೀಚೆಗೆ ಹುತಾತ್ಮರಾದ ಪೊಲೀಸ್‌ರ ಕುಟುಂಬಗಳಿಗೆ ನಾವೆಲ್ಲರೂ ಆತ್ಮಸ್ಥೈರ್ಯ ತುಂಬಬೇಕಾಗಿದೆ ಎಂದು ಹೇಳಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಮಾತನಾಡಿ, ರಾಷ್ಟ್ರದಾದ್ಯಂತ ಇಂದು ಪೊಲೀಸ್ ಹುತಾತ್ಮರ ದಿನ ಆಚರಿಸುತ್ತಿದ್ದು, ಈ ಮೂಲಕ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ಸಲ್ಲಿಸಲಾಗುತ್ತದೆ. 1957ರ ಅಕ್ಟೋಬರ್ 21ರಂದು ಸಿ.ಆರ್.ಪಿ.ಎಫ್.ನ ಒಂದು ಪೋಲಿಸ್ ಪಡೆಯು ಡಿಎಸ್ಪಿ ಕರಣ್‌ಸಿಂಗ್ ಅವರ ನೇತೃತ್ವದಲ್ಲಿ ಭಾರತ-ಚೀನಾ ಗಡಿಭಾಗದಲ್ಲಿ ಗಸ್ತು ಮಾಡುವಾಗ ಚೀನಾ ದೇಶದ ಸೈನಿಕರು ಭಾರತದಲ್ಲಿ ಅತಿಕ್ರಮಣ ಮಾಡಿದ್ದರು. ಆಗ ಭಾರತೀಯ ಪೋಲಿಸರಲ್ಲಿ ಕೇವಲ ಕೆಲವು ರೈಪಲ್‌ಗಳಿದ್ದವು. ಚೀನಾದ ಸೈನಿಕರ ಹತ್ತಿರ ಆಧುನಿಕ ಶಸ್ತ್ರಗಳಿದ್ದವು. ಆದರೂ ಸಹ ಭಾರತದ ಪೋಲಿಸರು ಅತೀ ಧೈರ್ಯ ಮತ್ತು ಸಹಾಸದಿಂದ ತಮ್ಮ ಕೊನೆಯ ಉಸಿರಿನವರೆಗೂ ವೈರಿಗಳ ಜೊತೆ ಯುದ್ಧ ಮಾಡಿದರು. ಆ ಸಮಯದಲ್ಲಿ ಹತ್ತು ಪೊಲೀಸ್ ಅಧಿಕಾರಿಗಳು ಹುತಾತ್ಮರಾದರು. ಉಳಿದವರನ್ನು ಚೀನಾದವರು ಬಂಧಿಸಿದರು. ಈ ಎಲ್ಲಾ ವೀರರು ದೇಶಕ್ಕಾಗಿ ತಮ್ಮ ಪ್ರಾಣವನ್ನೆ ಬಲಿಧಾನಕೊಟ್ಟ ಆ ದಿನದ ಮತ್ತು ಹುತಾತ್ಮರ ನೆನಪಿಗಾಗಿ ಸ್ಮಾರಕವನ್ನು ಕಟ್ಟಿಸಲಾಗಿದೆ. ದೇಶ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಪೋಲಿಸರ ಸ್ಮರಣೆಗಾಗಿ ಈ ದಿನವನ್ನು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ ಎಂದರು.

 ಕರ್ತವ್ಯ ಪಾಲನೆಯಲ್ಲಿ ಪೊಲೀಸ್ ಪಡೆಗಳು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿ ಹುತಾತ್ಮರಾದವರನ್ನು ಇಂದು ನಾವು ಸ್ಮರಿಸಬೇಕಾಗಿದೆ ಎಂದು ಹೇಳಿದ ಅವರು, ಕಳೆದ ಒಂದು ವರ್ಷದಲ್ಲಿ ನಮ್ಮ ದೇಶದಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸರನ್ನು ಇದೇ ವೇಳೆಯಲ್ಲಿ ಸ್ಮರಿಸಿದರು.

*ಪೊಲೀಸ್ ಹುತಾತ್ಮರಿಗೆ ಗೌರವ ಸಮರ್ಪಣೆ:* ಕಾರ್ಯಕ್ರಮದ ಆರಂಭದಲ್ಲಿ ಪೊಲೀಸ್ ಸ್ಮಾರಕಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇತರೆ ಅಧಿಕಾರಿಗಳು ಹಾಗೂ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು. ಹುತಾತ್ಮರಾದ ಪೋಲಿಸರಿಗೆ ಗೌರವ ಸಮರ್ಪಣೆಗಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಲಾಯಿತು ಮತ್ತು ಮೌನಾಚಾರಣೆ ಆಚರಿಸಲಾಯಿತು. ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯದ ವೇಳೆ ಇತ್ತೀಚೆಗೆ ನಿಧನರಾದ ಪೊಲೀಸ್ ಕುಟುಂಬದ ಸದಸ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. 

 ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ ಕುಮಾರ್ ಸೇರಿದಂತೆ ಡಿ.ವೈ.ಎಸ್.ಪಿ.ಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

About Mallikarjun

Check Also

screenshot 2025 10 23 18 09 37 81 6012fa4d4ddec268fc5c7112cbb265e7.jpg

ಹನೂರು ಪಟ್ಟಣದಲ್ಲಿ ಪ್ರಚಾರದ ಪ್ಲೆಕ್ಸ್ ಗಳಿಗಿಲ್ಲ ತಡೆ ಸರ್ಕಾರದ ಅಪಾರ ಪ್ರಮಾಣದ ಹಣ ಬೊಕ್ಕಸಕ್ಕೆ ನಷ್ಟ

The lack of a ban on campaign plexes in Hanur town is a huge loss …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.