Karnataka State Brahmin Development Board: Applications invited under Direct Loan Scheme
ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2025-26ನೇ ಸಾಲಿಗೆ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಮಂಡಳಿಯ ವತಿಯಿಂದ ನೇರವಾಗಿ ಸಾಲ, ಸಹಾಯಧನ ಮಂಜೂರು ಮಾಡಲಾಗುವುದು. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಘಟಕವೆಚ್ಚಕ್ಕೆ ರೂ.20,000/- ಗಳ ಸಹಾಯಧನ ಹಾಗೂ ಗರಿಷ್ಠ ರೂ.2 ಲಕ್ಷಗಳ ಘಟಕವೆಚ್ಚಕ್ಕೆ ರೂ. 40,000/- ಗಳ ಸಹಾಯಧನ ನೀಡಿ ಆರ್ಥಿಕ ನೆರವು ಒದಗಿಸಲಾಗುವುದು. ಉಳಿಕೆ ಸಾಲದ ಮೊತ್ತಕ್ಕೆ ಶೇ.4 ರಂತೆ ವಾರ್ಷಿಕ ಬಡ್ಡಿ ವಿಧಿಸಲಾಗುವುದು.
ಅರ್ಜಿ ಸಲ್ಲಿಸುವ ಫಲಾನುಭವಿಗಳು ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದು, ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲೂಎಸ್ ಪ್ರಮಾಣ ಪತ್ರ) ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿAದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಮಹಿಳೆಯರಿಗೆ ಶೇ.33, ವಿಶೇಷ ಚೇತನರಿಗೆ ಶೇ.5 ಮೀಸಲಾತಿಯನ್ನು ನೀಡಲಾಗುವುದು. ಅರ್ಜಿದಾರರ ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.
ಅರ್ಜಿಯನ್ನು www.ksbdb.karnataka.gov.in ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 31 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8762249230 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗವಿಶಂಕರ್ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
