Tobacco-free youth campaign in Thavaragera P.P.

ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಕೊಪ್ಪಳ ಹಾಗೂ ಪಟ್ಟಣ ಪಂಚಾಯತ್ ತಾವರಗೇರಾರವರ ಸಂಯುಕ್ತಾಶ್ರಯದಲ್ಲಿ ತಾವರಗೇರಾ ಪಟ್ಟಣ ಪಂಚಾಯತಿಯಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ತಂಬಾಕು ಮುಕ್ತ ಯುವ ಅಭಿಯಾನ 3.0 (ವಿಶೇಷ ಅಭಿಯಾನ 60 ದಿನಗಳು) ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಐಇಸಿ ಪ್ರಚಾರ ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ -2003 ರ ಬಗ್ಗೆ ಮಾಹಿತಿ ಹಾಗೂ ತಂಬಾಕು ಸೇವನೆಯನ್ನು ತ್ಯಜಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು. ಕೋಟ್ಪಾ-2003 ಕಾಯಿದೆ ಉಲ್ಲಂಘನೆ ಮಾಡಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿ, ಪಾನ್ ಶಾಪ್ ಮತ್ತು ಬಾರ್ ಮಾಲೀಕರಿಗೆ ದಂಡ ವಿಧಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತಂಡದ, ಜಿಲ್ಲಾ ಸಲಹೆಗಾರಾದ ಸಂಗಪ್ಪ ಮಮಟಗೇರಿ, ಸಮಾಜ ಕಾರ್ಯಕರ್ತೆ ಸರಸ್ವತಿ, ಪ.ಪಂ. ಮುಖ್ಯಾಧಿಕಾರಿ ಮಹೇಶ್ ಅಂಗಡಿ, ಶಂಕರಮ್ಮ ಎಲ್.ಎಚ್.ವಿ., ಹುಲ್ಲಪ್ಪ ಗಂಜಿ ಜೂ.ಎಚ್.ಐ ಹಾಗೂ ಸಿಬ್ಬಂದಿ, ಸಾರ್ವಜನಿಕರು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
Kalyanasiri Kannada News Live 24×7 | News Karnataka
