Breaking News

ಇಂದಿನಿಂದ ಮೂರು ದಿನಗಳ ಕಾಲ ಉಪಲೋಕಾಯುಕ್ತರ ಕೊಪ್ಪಳ ಜಿಲ್ಲಾ ಪ್ರವಾಸ

The short URL of the present article is: https://kalyanasiri.in/qgci
Upalokayukta's three-day tour of Koppal district from today

Screenshot 2025 10 28 19 14 39 99 E307a3f9df9f380ebaf106e1dc980bb62483856449022035407

ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 29 ರಿಂದ 31 ರವರೆಗೆ ಮೂರು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅ.29 ರಂದು ಬೆಳಿಗ್ಗೆ 7.43 ಗಂಟೆಗೆ ರೈಲು ಮಾರ್ಗದ ಮೂಲಕ ಕೊಪ್ಪಳಕ್ಕೆ ಆಗಮಿಸಿ ನಗರದ ಪ್ರವಾಸಿ ಮಂದಿರಕ್ಕೆ ತೆರಳುವರು. ಬೆಳಿಗ್ಗೆ 8.15 ಗಂಟೆಯಿAದ 9 ಗಂಟೆಯವರೆಗೆ ಉಪಹಾರದ ವಿರಾಮ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 1.30 ಗಂಟೆಯಿAದ 2.30 ಗಂಟೆಯವರೆಗೆ ಪ್ರವಾಸಿ ಮಂದಿರದಲ್ಲಿ ಊಟದ ವಿರಾಮ. ಮಧ್ಯಾಹ್ನ 2.30 ಗಂಟೆಯಿAದ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ರಾತ್ರಿ 8.30 ಗಂಟೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು.
ಅಕ್ಟೋಬರ್ 30 ರಂದು ಬೆಳಿಗ್ಗೆ 6.30 ಗಂಟೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವರು. ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಸಾರ್ವಜನಿಕರ ದೂರು, ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 1.30 ಗಂಟೆಯಿAದ 2.30 ಗಂಟೆಯವರೆಗೆ ಊಟದ ವಿರಾಮ. ಮಧ್ಯಾಹ್ನ 2.30 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಸಾರ್ವಜನಿಕರ ದೂರು, ಅಹವಾಲು ಸ್ವೀಕರಿಸುವರು. ಸಂಜೆ 5.30 ರಿಂದ 6.30 ಗಂಟೆಯವರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8.30 ಗಂಟೆಗೆ ಪ್ರವಾಸಿ ಮಂದಿರಕ್ಕೆ ತೆರಳುವರು.
ಅಕ್ಟೋಬರ್ 31 ರಂದು ಬೆಳಿಗ್ಗೆ 6.30 ಗಂಟೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.  ಬೆಳಿಗ್ಗೆ 8.30 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಉಪಹಾರದ ವಿರಾಮ. ಬೆಳಿಗ್ಗೆ 9.30 ಗಂಟೆಯಿAದ 10.45 ಗಂಟೆಯವರೆಗೆ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಂಗದ ಅಧಿಕಾರಿಗಳು, ವಕೀಲರು ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1.45 ರವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಗೆ ಸಂಬAಧಿಸಿದAತೆ ಲೋಕಾಯುಕ್ತದಲ್ಲಿ ಬಾಕಿ ಇರುವ ಹಾಗೂ ಉಪಲೋಕಾಯುಕ್ತರ ವ್ಯಾಪ್ತಿಗೆ ಬರುವ ವಿವಿಧ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಪ್ರಕರಣಗಳ ವಿಚಾರಣೆ ನಡೆಸುವರು.
ಮಧ್ಯಾಹ್ನ 1.45 ಗಂಟೆಯಿAದ 2.30 ರವರೆಗೆ ಪ್ರವಾಸಿ ಮಂದಿರಲ್ಲಿ ಊಟದ ವಿರಾಮ. ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ಪ್ರಕರಣಗಳ ವಿಚಾರಣೆಯನ್ನು ನಡೆಸುವರು.  ಸಂಜೆ 7.30 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಊಟದ ವಿರಾಮ. ಅಂದು ರಾತ್ರಿ 8 ಗಂಟೆಗೆ ಕೊಪ್ಪಳ ರೈಲ್ವೇ ನಿಲ್ದಾಣಕ್ಕೆ ತೆರಳಿ, 8.20 ಗಂಟೆಗೆ ಹಂಪಿ ಎಕ್ಸ್ಪ್ರೆಸ್ ರೈಲಿನ ಮುಖಾಂತರ ಕೊಪ್ಪಳದಿಂದ ಬೆಂಗಳೂರಿನ ಕಡೆ ಪ್ರವಾಸ ಬೆಳೆಸುವರು ಎಂದು ಕರ್ನಾಟಕ ಲೋಕಾಯುಕ್ತದ ರೆಜಿಸ್ಟಾçರ್ ಎಂ. ಚಂದ್ರಶೇಖರ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
The short URL of the present article is: https://kalyanasiri.in/qgci

About Mallikarjun

Check Also

ನವೆಂಬರ್ 1 ರಂದು ಜಿಲ್ಲಾ ಕೇಂದ್ರದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

70th Karnataka Rajyotsava Day celebrated at the district headquarters on November 1 ಕೊಪ್ಪಳ ಅಕ್ಟೋಬರ್ 28 …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.