70th Karnataka Rajyotsava Day celebrated at the district headquarters on November 1
ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ 2025ರ ಕಾರ್ಯಕ್ರಮವನ್ನು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಧ್ವಜಾರೋಹಣ ನೆರವೇರಿಸುವರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಸನಸಾಬ್ ನಬಿಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಕಾರ್ಯದರ್ಶಿ, ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾದೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣದ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
Kalyanasiri Kannada News Live 24×7 | News Karnataka
