
Awareness and quiz program on tuberculosis, infectious and non-communicable diseases

ಕ್ಷಯರೋಗ, ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಹಾಗೂ ರಸಪ್ರಶ್ನೆ ಕಾರ್ಯಕ್ರಮ

ಕೊಪ್ಪಳ ನವೆಂಬರ್ 04, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜ್ ಬನ್ನಿಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನ.3 ರಂದು ಕ್ಷಯರೋಗ ನಿರ್ಮೂಲನೆ ಹಾಗೂ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು, ಜಾಗೃತಿ ಹಾಗೂ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಕ್ಷಯರೋಗ(ಟಿ.ಬಿ) ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ಸೋಂಕಿತ ವ್ಯಕ್ತಿ ಕೆಮ್ಮಿದಾಗ ಮತ್ತು ಸೀನಿದಾಗ ಬರುವ ತುಂತುರು ಹನಿಗಳಿಂದ ಗಾಳಿ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಖ್ಯವಾಗಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹಾಗೂ ಸಹವ್ಯಾಧಿಗಳಿಗೆ ಬೇಗನೆ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಸತತ ಎರಡು ವಾರಗಳಿಂದ ಕೆಮ್ಮು ಕಾಣಿಸಿಕೊಂಡರೆ, ಕೆಮ್ಮಿನಲ್ಲಿ ಕಫ ಬಿದ್ದರೆ, ಕಫದಲ್ಲಿ ರಕ್ತ ಬಂದರೆ, ತೂಕ ಕಡಿಮೆಯಾದರೆ, ಸಾಯಂಕಾಲ ವೇಳೆ ಜ್ವರ ಬರುವ ಲಕ್ಷಣಗಳು ಇದ್ದರೆ ತಕ್ಷಣ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರೀಕ್ಷಿಸಿಕೊಂಡು, ರೋಗ ಕಂಡುಬAದರೆ ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.
ಯಾರೂ ಕೂಡ ಟಿ.ಬಿ ರೋಗದ ಬಗ್ಗೆ ನಿರ್ಲಕ್ಷö್ಯ ಮಾಡಕೂಡದು. ಕ್ಷಯರೋಗಿಗಳು ಎಲ್ಲಂದರಲ್ಲಿ ಉಗಳಬಾರದು. ಕೆಮ್ಮುವಾಗ ಮತ್ತು ಸೀನುವಾಗ ಕಡ್ಡಾಯವಾಗಿ ಕರವಸ್ತç ಬಳಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮನೆಗೆ ಭೇಟಿ ನೀಡಿದಾಗ, ಆರೋಗ್ಯದ ಯಾವುದೇ ಸಮಸ್ಯೆಗಳಿದ್ದರೆ ಅವರ ಹತ್ತಿರ ಚರ್ಚಿಸಿ, ಸಲಹೆ ಪಡೆದುಕೊಳ್ಳಬೇಕು ಮತ್ತು ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಸೇವಿಸಲು ನಿಕ್ಷಯ್ ಪೋಷಣ್ ಯೋಜನೆ ಅಡಿಯಲ್ಲಿ ಮಾಸಿಕ ರೂ.1000/- ಅವರ ಖಾತೆಗೆ ಜಮೆ ಮಾಡಲಾಗುವುದು. ವಿದ್ಯಾರ್ಥಿಗಳು ಕ್ಷಯರೋಗಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿ ಹಾಗೂ ವಾರ್ಡ್ಗಳಲ್ಲಿ ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಆರೋಗ್ಯವಂತ ಗ್ರಾಮಗಳನ್ನಾಗಿ ಮಾಡಲು ಶ್ರಮಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ 6 ತಂಡಗಳು ಭಾಗವಹಿಸಿದ್ದವು. ಅದರಲ್ಲಿ ಮಹಾಲಕ್ಷಿö್ಮÃ, ಅಮೃತ ಪ್ರಥಮ(ರೂ.500), ಅಕ್ಷತಾ, ಗ್ಯಾನೇಶ್ವರಿ ದ್ವಿತೀಯ(ರೂ.300) ಹಾಗೂ ಶಾಲಿನಿ, ಸುಮಂಗಲ ತೃತೀಯ(ರೂ.200) ಬಹುಮಾನಗಳನ್ನು ಪಡೆದುಕೊಂಡರು. ಬಹುಮಾನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಲಿಂಗೇಶ ಇವರು ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಮಾತನಾಡಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಾಂತಾ ಮಠದ ಇವರು ಬಾಲ್ಯವಿವಾಹ ನಿಷೇಧ, ಆರ್.ಸಿ.ಹೆಚ್, ಕುಟುಂಬ ಕಲ್ಯಾಣ ಹಾಗೂ ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ಕುರಿತು ವಿವರವಾಗಿ ಮತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ ಇವರು ತಮ್ಮ ಅಧ್ಯಕ್ಷರ ಭಾಷಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಳ್ಳುವ ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿವೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿ ಹಾಗೂ ಸುತ್ತ ಮುತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀಕಾಂತ, ಕಾಲೇಜಿನ ಸಹಉಪನ್ಯಾಸಕ ವರ್ಗದವರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.




