Breaking News

ಕೊಪ್ಪಳ ಜಿಲ್ಲಾ ೧೧ನೇಯ ಚುಟುಕು ಸಾಹಿತ್ಯ ಸಮ್ಮೇಳನ

Koppal District 11th Chutuku Sahitya Sammelana

ನವೆಂಬರ್-೦೯ ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ
ಹಿರಿಯ ಸಾಹಿತಿ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ
ಕೊಪ್ಪಳ ಜಿಲ್ಲಾ ೧೧ನೇಯ ಚುಟುಕು ಸಾಹಿತ್ಯ ಸಮ್ಮೇಳನ

ಜಾಹೀರಾತು
Screenshot 2025 11 05 20 44 12 94 E307a3f9df9f380ebaf106e1dc980bb68042056094005477328 750x1024

ಗಂಗಾವತಿ: ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನವಂಬರ್-೯ ಭಾನುವಾರದಂದು ಹಿರಿಯ ಸಾಹಿತಿಗಳಾದ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ೧೧ನೇ ಚುಟುಕು ಸಾಹಿತ್ಯ ಸಮ್ಮೇಳನ ಜರುಗಲಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಪರಿಷತ್ತಿನ ಗಂಗಾವತಿ ತಾಲೂಕ ಅಧ್ಯಕ್ಷರಾದ ಅಶೋಕ ಗುಡಿಕೋಟಿ ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಮ್ಮೇಳನವು ದಿನದಂದು ಬೆಳಗ್ಗೆ ೧೦ ರಿಂದ ರಾತ್ರಿ ೧೦ ರವರೆಗೆ ಜರುಗಲಿದ್ದು, ಇದರ ದಿವ್ಯಸಾನಿಧ್ಯವನ್ನು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಕುಕನೂರು ಶಾಖಾಮಠದ ಡಾ. ಮಹಾದೇವ ಮಹಾಸ್ವಾಮಿಗಳು, ಗಜೇಂದ್ರಗಡ ಕಾಲಜ್ಞಾನಮಠದ ಶ್ರೀ ಶರಣಬಸವೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು, ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿಯವರು ಮಾಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಎಂ.ಜಿ.ಆರ್. ಅರಸ್ ವಹಿಸಲಿದ್ದಾರೆ. ಈ ಸಮ್ಮೇಳನದ ಗೋಷ್ಠಿ-೧ ರಲ್ಲಿ ಚುಟುಕು ಸಾಹಿತ್ಯ ವೈಶಿಷ್ಟö್ಯತೆ ಮತ್ತು ಅವಲೋಕನ ಮತ್ತು ಗೋಷ್ಠಿ-೨ ರಲ್ಲಿ ಕೊಪ್ಪಳ ಜಿಲ್ಲೆಯ ಅಭಿವೃದ್ಧಿ ಸವಾಲುಗಳು : ಒಂದು ಚಿಂತನೆ ಕುರಿತು ಉಪನ್ಯಾಸ ನಡೆಯಲಿದೆ. ಈ ಸಮ್ಮೇಳನದ ಆಯೋಜನೆಯನ್ನು ಕೊಪ್ಪಳ ಜಿಲ್ಲಾಧ್ಯಕ್ಷರಾದ ರುದ್ರಪ್ಪ ಭಂಡಾರಿ ಹಾಗೂ ಕಾರ್ಯಕಾರಿ ಮಂಡಳಿಯವರು ಮಾಡಿದ್ದು, ಸಮ್ಮೇಳನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಕವಿಗಳು ಹಾಗೂ ಕವಯಿತ್ರಿಗಳು ಪಾಲ್ಗೊಳ್ಳಲಿದ್ದು, ಕವಿಗೋಷ್ಠಿಗಳು, ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಈ ಚುಟುಕು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ವೀರಣ್ಣ ವಾಲಿಯವರು ಮೂಲತಃ ಯಲಬುರ್ಗಾ ತಾಲೂಕಿನ ಕರಮುಡಿಯವರು. ಇವರು “ಆಶಾಡ ವಿಭೂತಿಗಳು”. “ಮೌನ ನಿನಾದ”. “ನಮ್ಮ ನೆಲ ನಮ್ಮ ಜನ”. “ಲೇಖನ ಮಾಲೆ” ಸೇರಿದಂತೆ ಅನೇಕ ಕೃತಿಗಳನ್ನು ಸಾಹಿತ್ಯ ಚಂಪಾದಿತ ಚುಟುಕುಗಳನ್ನು ಪ್ರಕಟಿಸಿದ್ದು, ಹಲವಾರು ಲೇಖನಗಳನ್ನು ಪತ್ರಿಕೆಗಳಿಗೆ ಬರೆಯುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಈ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಾಹಿತ್ಯಾಸಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಗಂಗಾವತಿ ಚುಟುಕು ಸಾಹಿತ್ಯ ಪರಿಷತ್ತು ಕೋರಿದೆ ಎಂದು ತಿಳಿಸಿದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.