ಕೊಪ್ಪಳ ನಗರಸಭೆ: ಕನ್ನಡದಲ್ಲಿ ನಾಮಫಲಕ ಹಾಕುವಂತೆ ಸೂಚನೆ

Koppal Municipal Council: Instructions to put up nameplates in Kannada

ಕೊಪ್ಪಳ ನಗರಸಭೆ: ಕನ್ನಡದಲ್ಲಿ ನಾಮಫಲಕ ಹಾಕುವಂತೆ ಸೂಚನೆ

ಕೊಪ್ಪಳ ನವೆಂಬರ್ 06, (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲ್ಲಿನ ಎಲ್ಲಾ ಉದ್ದಿಮೆದಾರರು ತಮ್ಮ ತಮ್ಮ ಅಂಗಡಿ, ವ್ಯಾಪಾರ ಮಾಡುವ ಸ್ಥಳದಲ್ಲಿನ ನಾಮಫಲಕದ ಶೇ. 60 ರಷ್ಟು ಭಾಗವನ್ನು ಕನ್ನಡಕ್ಕಾಗಿ ಮೀಸಲಿಟ್ಟು ದಪ್ಪ ಅಕ್ಷರಗಳಲ್ಲಿ ಬರೆಯಿಸಿರುವ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚಿಸಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ 2022 ರನ್ವಯ ಕನ್ನಡವನ್ನು ಸಮಾಜದ ಎಲ್ಲಾ ಸ್ಥರಗಳಲ್ಲಿ ಉಳಿಸುವ ನಿಟ್ಟಿನಲ್ಲಿ ಹಲವು ಅವಕಾಶಗಳನ್ನು ಕಲ್ಪಿಸಿದೆ. ಈ ಕಾಯ್ದೆಯ ಅವಕಾಶಗಳಡಿಯಲ್ಲಿ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60 ರಷ್ಟು ಸ್ಥಾನ ಕಲ್ಪಿಸಬೇಕೆಂದು ಸರ್ಕಾರ ಆದೇಶವನ್ನು ಹೊರಡಿಸಿದೆ. ಆದ್ದರಿಂದ ತಮ್ಮ ಅಂಗಡಿಗಳ ನಾಮಫಲಕಗಳಲ್ಲಿ ಒಟ್ಟು ನಾಮಫಲಕದ ಶೇ. 60 ರಷ್ಟು ಭಾಗವನ್ನು ಕನ್ನಡಕ್ಕಾಗಿ ಮೀಸಲಿಟ್ಟು, ದಪ್ಪ ಅಕ್ಷರಗಳಲ್ಲಿ ಬರೆಯಿಸಲು ಕ್ರಮವಹಿಸತಕ್ಕದ್ದು. ಜೊತೆಗೆ ನಗರದ ಹೆಸರನ್ನು ಕಡ್ಡಾಯವಾಗಿ ದಪ್ಪ ಅಕ್ಷರಗಳಲ್ಲಿ ಬರೆಯಿಸತಕ್ಕದ್ದೆಂದು ಆದೇಶವನ್ನು ಜಾರಿ ಮಾಡಲಾಗಿರುತ್ತದೆ.
 ಉಳಿದ ಶೇ. 40 ರಷ್ಟು ಭಾಗದಲ್ಲಿ ಅನ್ಯ ಭಾಷೆಗಳಿಗೆ ಅಥವಾ ಸಂಪೂರ್ಣವಾಗಿ ಕನ್ನಡದಲ್ಲಿ ಹಾಕಿಸಲು ಈ ಪ್ರಕಟಣೆಯ ದಿನದಿಂದ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ತಪ್ಪಿದಲ್ಲಿ ಅಂಥಹ ನಾಮಫಲಕಗಳನ್ನು ತೆರವುಗೊಳಿಸಲು ಹಾಗೂ ತಮ್ಮ ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸಲು ನಿಯಮಾನುಸಾರ ಕ್ರಮವಹಿಸಲಾಗುವುದೆಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

57 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago