A minor girl was raped by her own brother in a village in Koppal taluk: Sharada Gaddi condemnsಕೊಪ್ಪಳ ತಾಲೂಕಿನ ಗ್ರಾಮವೊಂದರಲ್ಲಿ ಎ ಐ ಎಂ ಎಸ್ಅಪ್ರಾಪ್ತ ಬಾಲಕಿಯೊಬ್ಬಳನ್ನು ಸ್ವಂತ ಅಣ್ಣನಿಂದಲೇ ಅತ್ಯಾಚಾರ: ಶಾರದಾ ಗಡ್ಡಿ ಯವರಿಂದ ಖಂಡನೆ

ಎ ಐ ಎಂ ಎಸ್ ಎಸ್ ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ
ಕೊಪ್ಪಳ ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಸ್ವಂತ ಅಣ್ಣನಿಂದಲೇ ನಿರಂತರ ಅತ್ಯಾಚಾರಕ್ಕೊಳಪಟ್ಟು ತಾಯಿಯಾಗಿರುವ ಅಮಾನವೀಯ ಘಟನೆಯ ಬಗ್ಗೆ ಎ ಐ ಎಂ ಎಸ್ ಎಸ್ (ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ) ಕೊಪ್ಪಳ ಜಿಲ್ಲಾ ಸಂಘಟನಾ ಸಮಿತಿಯು ತನ್ನ ಆಘಾತವನ್ನು ವ್ಯಕ್ತಪಡಿಸುತ್ತಾ ಅದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ ಎಂದರು.
ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬಹಿರಂಗವಾಗಿದೆ. ಮನೆಯಲ್ಲಿ ಯಾರು ಇಲ್ಲದಾಗ ಅಣ್ಣನು ನಾನು ನಿನ್ನನ್ನು ಮದುವೆಯಾಗುತ್ತೇನೆ. ಯಾವತ್ತು ಕೈ ಬಿಡುವುದಿಲ್ಲ ಎಂದು ಪುಸಾಯಿಸಿ 17 ವರ್ಷದ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿ ಅವನನ್ನು ಬಂಧಿಸಲಾಗಿದೆ. ಆದರೆ ಇದು ಇಷ್ಟಕ್ಕೆ ಸೀಮಿತಗೊಳ್ಳದೆ ಶೀಘ್ರಗತಿಯಲ್ಲಿ ತನಿಖೆಯನ್ನು ನಡೆಸಿ ಆರೋಪಿಗೆ ಉಗ್ರ ಶಿಕ್ಷೆಯನ್ನು ವಿಧಿಸಬೇಕು, ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸಬೇಕೆಂದು ಎ ಐ ಎಂ ಎಸ್ ಎಸ್ ಆಗ್ರಹಿಸುತ್ತದೆ.
ಮಹಿಳೆಯರ ಮೇಲೆ ದಿನನಿತ್ಯ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯಗಳ ವಿರುದ್ಧ ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಗಳು ಇಚ್ಛಾ ಶಕ್ತಿ ಹೊಂದಿಲ್ಲದೆ ಇರುವುದು ಘಟನೆಗಳು ಹೆಚ್ಚಾಗಲು ಕಾರಣವಾಗಿದೆ. ಸಮಾಜದಲ್ಲಿ ಮೌಲ್ಯಗಳ ಕುಸಿತದಿಂದಾಗುತ್ತಿರುವ ಸಾಂಸ್ಕೃತಿಕ ಅವನತಿಯ ಗುರುತುಗಳೇ ಇಂತಹ ಪ್ರಕರಣಗಳು. ಜೊತೆಗೆ ಇಂದಿನ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ-ಸಾಹಿತ್ಯ, ಪೋರ್ನ್ ವೆಬ್ಸೈಟ್ ಗಳು, ಮದ್ಯ ಮಾದಕ ವಸ್ತುಗಳು ವಿದ್ಯಾರ್ಥಿ-ಯುವಕರನ್ನು ವಿಕೃತ ಕೃತ್ಯಗಳಲ್ಲಿ ತೊಡಗುವಂತೆ ಪ್ರೇರೆಪಿಸುತ್ತಿವೆ. ಸಮಾಜದ ನೈತಿಕ ಬೆನ್ನೆಲುಬು ಮುರಿಯುವ ಇಂತಹ ಹುನ್ನಾರದ ಹಿಂದಿರುವ ಸರ್ಕಾರಗಳು ಮತ್ತು ವ್ಯವಸ್ಥೆಯ ವಿರುದ್ಧ ಪ್ರಜ್ಞಾವಂತ ಜನತೆ ಒಗ್ಗಟ್ಟಾಗಿ ಹೋರಾಟ ಕಟ್ಟುವುದು ಘಳಿಗೆಯ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಜನತೆ ಮುಂದೆ ಬರಬೇಕು ಎಂದು ಎ ಐ ಎಂ ಎಸ್ ಎಸ್ ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ ಪ್ರಕಟಣೆ ಮೂಲಕ ಕರೆ ನೀಡುತ್ತದೆ.
Kalyanasiri Kannada News Live 24×7 | News Karnataka
