The short URL of the present article is: https://kalyanasiri.in/zf20
Water for the monsoon season: Irrigation Advisory Committee meeting in Bengaluru on the 14thಹಿಂಗಾರು ಹಂಗಾಮಿಗೆ ನೀರು: 14 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ
ಜಾಹೀರಾತು

ಕೊಪ್ಪಳ ನವೆಂಬರ್ 10, (ಕರ್ನಾಟಕ ವಾರ್ತೆ): 2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ಉಪಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ ಅವರ ಅಧ್ಯಕ್ಷತೆಯಲ್ಲಿ 125ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ನವೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.
ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಸ್.ಬಿ ಮಲ್ಲಿಗೆವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.